ಯುಗಾದಿ ಮತ್ತು ರಮಝಾನ್ ಹಬ್ಬಗಳ ಸಂದರ್ಭ ವಿಶೇಷ ಎಕ್ಸ್‌ಪ್ರೆಸ್ ರೈಲು

ಯುಗಾದಿ ಮತ್ತು ರಮಝಾನ್ ಹಬ್ಬಗಳ ಸಂದರ್ಭ ವಿಶೇಷ ಎಕ್ಸ್‌ಪ್ರೆಸ್ ರೈಲು

ಮಂಗಳೂರು: ಮುಂದಿನ ಯುಗಾದಿ ಮತ್ತು ರಮಝಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ವಿಶೇಷ ರೈಲು ಸೇವೆಯ ವಿವರಗಳು: ರೈಲು ಸಂಖ್ಯೆ 06203 ಮೈಸೂರು-ಕಾರವಾರ ವಿಶೇಷ ಎಕ್ಸ್‌ಪ್ರೆಸ್ ರೈಲು ಮಾ.28 ರಂದು ರಾತ್ರಿ 9.35ಕ್ಕೆ ಮೈಸೂರಿನಿಂದ ಹೊರಟು ಮರುದಿನ ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. ಪುನಃ ಇದೇ ರೈಲು (06204) ಮಾ.೨೯ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಮರುದಿನ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ. 

ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಕುಣಿಗಲ್, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. 

ಈ ರೈಲು 1 ಎಸಿ 2 ಟೈರ್ ಕಮ್ ಎಸಿ 3 ಟೈರ್, ೩ ಎಸಿ 3 ಟೈರ್, 13 ಸ್ಲೀಪರ್ ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್/ಡಿ ಬೋಗಿಗಳು ಸೇರಿದಂತೆ 21 ಬೋಗಿಗಳನ್ನು ಒಳಗೊಂಡಿರುತ್ತದೆ. 

ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್ ಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article