
ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು
Monday, March 17, 2025
ಮಂಗಳೂರು: ಕೋಮು ದ್ವೇಷ ಭಾಷಣ ಆರೋಪ ಸಂಬಂಧ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚಕ್ರವರ್ತಿ ಸೂಲಿಬೆಲೆ ಇತ್ತೀಚೆಗೆ ಕುತ್ತಾರಿನಲ್ಲಿ ನಡೆದ ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆಯ ಸಮಾರೋಪ ಸಭೆಯಲ್ಲಿ ಕೋಮು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಉಳ್ಳಾಲ ಠಾಣೆಗೆ ರವಿವಾರ ದೂರು ನೀಡಿದ್ದರು.
ಈ ದೂರು ಆಧರಿಸಿ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.