
ಕರ್ನಾಟಕದ ಸಮಗ್ರ ಅಭಿವೃದ್ಧಿಯ ಬಜೆಟ್
Friday, March 7, 2025
ಮಂಗಳೂರು: ಕರ್ನಾಟಕದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿ ಹೊಂದಿರುವ ಸಾಮಾಜಿಕ ನ್ಯಾಯದ ಆಯವ್ಯಯ. ಶಿಕ್ಷಣ, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಸಂಶೋಧನೆ, ಪ್ರವಾಸೋದ್ಯಮ, ಆರೋಗ್ಯ, ಗ್ರಾಮೀಣಾಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ‘ದ.ಕ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಮಂಡಿಸಿದ ಐತಿಹಾಸಿಕ ಬಜೆಟ್ ಆಗಿದೆ. ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ ಉತ್ತಮ ಬಜೆಟ್ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ.