ರಾಜ್ಯದ ಪೊಲೀಸ್ ಇತಿಹಾಸದಲ್ಲೇ ಅತೀ ಹೆಚ್ಚು ಮೊತ್ತದ ಎಂಡಿಎಂಎ ಡ್ರಗ್ಸ್ ವಶ: ಇಬ್ಬರು ದಕ್ಷಿಣ ಆಫ್ರಿಕಾ ಪ್ರಜೆಗಳ ಬಂಧನ

ರಾಜ್ಯದ ಪೊಲೀಸ್ ಇತಿಹಾಸದಲ್ಲೇ ಅತೀ ಹೆಚ್ಚು ಮೊತ್ತದ ಎಂಡಿಎಂಎ ಡ್ರಗ್ಸ್ ವಶ: ಇಬ್ಬರು ದಕ್ಷಿಣ ಆಫ್ರಿಕಾ ಪ್ರಜೆಗಳ ಬಂಧನ


ಮಂಗಳೂರು: ರಾಜ್ಯಕ್ಕೆ ಮತ್ತು ಇತರ ಸ್ಥಳಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ದ. ಆಫ್ರಿಕಾದ ಇಬ್ಬರು ಪ್ರಜೆಗಳನ್ನು ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಬಂಬಾ ಫಂಟಾ (31) ಮತ್ತು ಅಬಿಗೈಲ್ ಅಡೊನಿಸ್ (30) ಬಂಧಿತ ಆರೋಪಿಗಳು.

ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವೊಂದನ್ನು ಬೇಧಿಸಿದ ಮಂಗಳೂರು ಪೊಲೀಸರು ಸುಮಾರು 75 ಕೋಟಿ ರೂ. ಮೌಲ್ಯದ 37.87 ಕೆ.ಜಿ. ತೂಕದ ಎಂಡಿಎಂಎ ಡ್ರಗ್ಸ್‌ನ್ನು ವಶಪಡಿಸಿಕೊಂಡಿದ್ದಾರೆ.


ಮಾರ್ಚ್ 14ರಂದು ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿದ್ದ ದಕ್ಷಿಣ ಆಫ್ರಿಕಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಎರಡು ಟ್ರಾಲಿ ಬ್ಯಾಗ್ ಗಳಲ್ಲಿ ಸಾಗಾಟ ಮಾಡಿದ್ದ 75 ಕೋಟಿ ರೂ. ಮೌಲ್ಯದ 37.585 ಕೆ.ಜಿ. ಎಂಡಿಎಂಎ, ನಾಲ್ಕು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

2024ರಲ್ಲಿ ಪಂಪ್‌ವೆಲ್ ಬಳಿ ಲಾಡ್ಜ್‌ವೊಂದರಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಹೈದರ್ ಆಲಿ ಎಂಬಾತನನ್ನು ಬಂಧಿಸಲಾಗಿತ್ತು. ಈತನಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನೈಜಿರಿಯಾದ ಪ್ರಜೆ ಪೀಟರ್ ಇಕೆಡಿ ಬೆಲೊನ್ವೊ ಎಂಬಾತನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಈತನಿಂದ 6.248 ಕೆ.ಜಿ. ಎಂಡಿಎಂಎ ವಶಪಡಿಸಲಾಗಿತ್ತು.

ಈತನ ಹಿನ್ನೆಲೆಯನ್ನು ಬೆನ್ನತ್ತಿ ಹೋದ ಮಂಗಳೂರು ಸಿಸಿಬಿ ಪೊಲೀಸರು ಆರು ತಿಂಗಳ ನಿರಂತರ ತನಿಖೆಯಿಂದ ಅತಿ ದೊಡ್ಡ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿದ್ದಾರೆ. ಈ ವೇಳೆ ದೆಹಲಿಯಿಂದ ಬೆಂಗಳೂರಿಗೆ ಮತ್ತು ದೇಶದ ಇತರ ಸ್ಥಳಗಳಿಗೆ ಎಂಡಿಎಂಎ ವಿಮಾನ ಮಾರ್ಗದ ಮೂಲಕ ಪೂರೈಕೆ ಮಾಡುತ್ತಿದ್ದ ಮಾಹಿತಿ ದೊರಕಿತ್ತು.

ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್, ರವಿಶಂಕರ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article