ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ಕು ಕಡೆ ಸರ್ವಿಸ್ ರಸ್ತೆ ನಿರ್ಮಿಸಲು ಪ್ರಕ್ರಿಯೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ಕು ಕಡೆ ಸರ್ವಿಸ್ ರಸ್ತೆ ನಿರ್ಮಿಸಲು ಪ್ರಕ್ರಿಯೆ


ಮಂಗಳೂರು: ಮೂಲ್ಕಿಯಿಂದ ತಲಪಾಡಿವರೆಗಿನ ರಾಷ್ಟ್ರೀಯ ಹೆದ್ದಾರಿ 66ರ ನಾಲ್ಕು ಕಡೆ ಸರ್ವಿಸ್ ರಸ್ತೆಗಳನ್ನು ನಿರ್ಮಿಸಲು ಅಗತ್ಯ ಪ್ರಕ್ರಿಯಗಳನ್ನು ನಡೆಸಲಾಗಿದ್ದು, ಮಳೆಗಾಲದ ಬಳಿಕ ಕಾಮಗಾರಿ ಆರಂಭಗೊಳ್ಳುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ದ ಅಧಿಕಾರಿಗಳು ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ತಿಳಿಸಿದ್ದಾರೆ.

ಜಿ.ಪಂ.ನ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸದ ಕ್ಯಾ. ಬ್ರಿಜೇಶ್ ಚೌಟರವರು, ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಗಳ ನಿರ್ಮಾಣದ ಬಗ್ಗೆ ವಿಚಾರಿಸಿದಾಗ, ಪ್ರತಿಕ್ರಿಯಿಸಿದ ಎನ್‌ಎಚ್‌ಎಐನ ಯೋಜನಾ ಅಧಿಕಾರಿ ಅಬ್ದುಲ್ಲಾ ಜಾವೇದ್ ಅಝ್ಮಿ ಈ ಪ್ರತಿಕ್ರಿಯೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ, ಪಡುಪಣಂಬೂರು, ಹಳೆಯಂಗಡಿ ಮತ್ತು ಬೀರಿಯಲ್ಲಿ ಸರ್ವಿಸ್ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಮುಲ್ಕಿಯ ಬಪ್ಪನಾಡುವಿನಲ್ಲಿ 500 ಮೀಟರ್, ಪಡುಪಣಂಬೂರಿನಲ್ಲಿ 380 ಮೀಟರ್, ಹಳೆಯಂಗಡಿಯಲ್ಲಿ 550 ಮೀಟರ್ ಹಾಗೂ ಬೀರಿಯಲ್ಲಿ 700 ಮೀಟರ್ ಉದ್ದದ ಸರ್ವಿಸ್ ರಸ್ತೆಗಳಿಗೆ ಬಿಡ್ಡಿಂಗ್ ಪ್ರಕ್ರಿಯೆ ನಡೆದು ಏಜೆನ್ಸಿಗಳನ್ನು ನಿಗದಿಪಡಿಸಲಾಗಿದೆ. ಮಳೆಗಾಲದ ಬಳಿಕ ಕಾಮಗಾರಿ ಆರಂಭಿಸಲಾಗುವುದು ಎಂದು ಅಬ್ದುಲ್ಲಾ ಜಾವೇದ್ ಅಝ್ಮಿ ತಿಳಿಸಿದರು.

ಸಂಚಾರ ಅನುಮತಿ..

ಅಡ್ಡಹೊಳೆಯಿಂದ ಬಿಸಿರೋಡ್ ನಡುವಿನ ಚತುಷ್ಪಥ ಕಾಮಗಾರಿಯ ನಾಲ್ಕು ಪ್ಯಾಕೇಜ್ಗಳಲ್ಲಿ ಪ್ಯಾಕೇಜ್ 1ರ (ಅಡ್ಡಹೊಳೆಯಿಂದ ಪೆರಿಯಶಾಂತಿ) ಶೇ. 95.4ರಷ್ಟುಕಾಮಗಾರಿ ಪೂರ್ಣಗೊಂಡಿದೆ. ಪ್ಯಾಕೇಜ್ 2ರ ಪೆರಿಯಶಾಂತಿಯಿಂದ ಬಿಸಿರೋಡ್‌ತನಕದ ಶೇ. 73ರಷ್ಟುಕಾಮಗಾರಿ ಪೂರ್ಣವಾಗಿದೆ. ಕಲ್ಲಡ್ಕ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿದು, ಅಂತಿಮ ಕಾಮಗಾರಿಗಳು, ಸಂಪರ್ಕ ರಸ್ತೆಗಳ ಕಾಮಗಾರಿ ನಡೆಯುತ್ತಿದ್ದು, ಎಪ್ರಿಲ್ನಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದರು.

ಟೋಲ್ ಮುಕ್ತಗೊಳಿಸಿ...

ಉಡುಪಿಯಲ್ಲಿ ಈಗಾಗಲೇ ಸ್ಥಳೀಯರಿಗೆ ಟೋಲ್ ಮುಕ್ತಗೊಳಿಸುವ ಕಾರ್ಯ ನಡೆದಿದ್ದು, ಹೆಜಮಾಡಿ ಟೋಲ್ನಲ್ಲಿಯೂ ಹೆಜಮಾಡಿ ಗ್ರಾ.ಪಂ. ಹಾಗೂ ಮುಲ್ಕಿ ನಗರ ಪಂಚಾಯತ್ ನಿವಾಸಿಗಳಿಗೆ ಟೋಲ್ ಮುಕ್ತಗೊಳಿಸಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಒತ್ತಾಯಿಸಿದರು.

ಸ್ಥಳೀಯರಿಗೆ ಪಾಸ್ ವ್ಯವಸ್ಥೆ ಮೂಲಕ ಟೋಲ್ ದರವನ್ನು ಕಡಿತಮಾಡಲಾಗಿದೆ ಎಂದು ಎನ್‌ಎಚ್‌ಎಐ ಅದಿಕಾರಿಗಳು ತಿಳಿಸಿದಾಗ, ಈ ಜಿಲ್ಲಾಧಿಕಾರಿ ಸಂಬಂಧಪಟ್ಟವರ ಸಭೆ ಕರೆದು ತೀರ್ಮಾನಿಸಿ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಸಲಹೆ ನೀಡಿದರು.

ಶಾಖಾಘಾತದ ಆತಂಕ..

ಜಿಲ್ಲೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದ್ದು, ಆಗಾಗ್ಗೆ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಮೆಸ್ಕಾಂ ವಿದ್ಯುತ್ ಕೊರತೆಯನ್ನು ಎದುರಿಸುತ್ತಿದೆಯೇ, ಈ

ವಿದ್ಯುತ್ ಕಡಿತ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಶಾಸಕ ಹರೀಶ್ ಪೂಂಜಾ ಆಗ್ರಹಿಸಿದರು.

ಮೆಸ್ಕಾಂ ಹಿರಿಯ ಅಧಿಕಾರಿ ರವಿಕಾಂತ್ ಪ್ರತಿಕ್ರಿಯಿಸಿ, ಕಳೆದ ಕೆಲ ದಿನಗಳಿಂದ ದ.ಕ. ಜಿಲ್ಲೆಯಲ್ಲಿಯೂ ಬಿಸಿಗಾಳಿಯು ತೀವ್ರವಾಗಿದೆ. ಇದರಿಂದ ವಿದ್ಯುತ್ ಉಪಕರಣಗಳೂ

ಶಾಖಾಘಾತಕ್ಕೆ ಒಳಗಾಗಿ ತೊಂದರೆಯಾಗುವ ಆತಂಕ ಎದುರಾಗಿದ್ದು, ಅವುಗಳ ಸುರಕ್ಷತೆಯ ಹಿನ್ನೆಲೆಯಲ್ಲಿ ವಿದ್ಯುತ್ ಕಡಿತ ಆಗುತ್ತಿದ್ದು, ಈ ಸಮಸ್ಯೆ ಬಗೆಹರಿಯಲಿದೆ ಎಂದರು.

ಶಾಸಕರಾದ ಭಾಗೀರಥಿ, ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್, ಜಿ.ಪಂ. ಸಿಇಒ ಡಾ. ಆನಂದ್, ಜಿಲ್ಲಾ ಅರಣ್ಯ ಉಪ ಸಂಕ್ಷಣಾಧಿಕಾರಿ ಆಂಟನಿ ಮರಿಯಪ್ಪ, ಡಿಸಿಪಿ ಸಿದ್ಧಾರ್ಥ್ ಗೋಯಲ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article