
ಶುಭ ಕೆ.ಹೆಚ್. ಅವರಿಗೆ 'ವೀರ ವನಿತೆ ಪ್ರಶಸ್ತಿ
Tuesday, March 11, 2025
ಮಂಗಳೂರು/ಬೆಂಗಳೂರು: ಮಾ.8 ರಂದು ಬೆಂಗಳೂರಿನ ಸದಾಶಿವ ನಗರದಲ್ಲಿ ನಡೆದ ಪ್ರಸಿದ್ಧ 'ಚಿತ್ರಸಂತೆ' ಸಂಸ್ಥೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಶುಭ ಕೆ.ಹೆಚ್. ಅವರು ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸಾಧನೆಗಾಗಿ ಇವರಿಗೆ 'ವೀರ ವನಿತೆ ಪ್ರಶಸ್ತಿ-2025' ಪ್ರಶಸ್ತಿಯನ್ನು ನೀಡಿ ಗೌರವಿಸಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕನ್ನಡ ಚಲನಚಿತ್ರ ರಂಗದ ಖ್ಯಾತ ಚಿತ್ರ ನಟಿ ಡಾ. ಪ್ರಿಯಾಂಕಾ ಉಪೇಂದ್ರ ಹಾಗೂ ಜ್ಯೋತಿಷಿ ಡಾ. ದಿನೇಶ್ ಗುರೂಜಿ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು.