
ಮಂಜೇಶ್ವರ ಅನಂತೇಶ್ವರ ದೇವಸ್ಥಾನ: 221ನೇ ವರ್ಷದ ಪುನರ್ ಪ್ರತಿಷ್ಠಾ ವರ್ದ೦ತಿ
Monday, March 17, 2025
ಮಂಜೇಶ್ವರ: ಶ್ರೀಮದ್ ಅನಂತೇಶ್ವರ ದೇವಸ್ಥಾನ ಮಂಜೇಶ್ವರ ಇದರ 221ನೇ ವರ್ಷದ ಪುನರ್ ಪ್ರತಿಷ್ಠಾ ವರ್ದ೦ತಿ ಹಾಗೂ ಬೆಳ್ಳಿ ಲಾಲ್ಕಿಯ 150ನೇ ವರ್ಷದ ಸಂಭ್ರಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿತು.
ಬೆಳಗ್ಗೆ ಬೆಳ್ಳಿ ಪಲ್ಲಕಿ ಹಗಲೋತ್ಸವ, ಮಧ್ಯಾಹ್ನ ಸಮಾಜಭಾಂದವರಿಂದ ಶ್ರೀ ನರಸಿಂಹ ಸ್ತುತಿ ಪಠಣದೊಂದಿಗೆ ಪ್ರದಕ್ಷಿಣಾ ಸೇವೆ, ಸಮೃದ್ಧವಾದ ನಿರೀಕ್ಷಣಾ ವಸ್ತುಗಳು ಶ್ರೀ ದೇವರಿಗೆ ವಾದ್ಯ ಘೋಷ್ಠಿಯೊಂದಿಗೆ ಸಮರ್ಪಣೆ ಮಾಡಲಾಯಿತು. ರಾತ್ರಿ 150ನೇ ವರ್ಷದ ಬೆಳ್ಳಿ ಲಾಲ್ಕಿಗೆ ಅಪೂರ್ವ ಅಲಂಕಾರದೊಂದಿಗೆ ಉತ್ಸವ ಹಾಗೂ ಪೂಜಾ ಸೇವೆ, ಉತ್ಸವದಲ್ಲಿ ಅದ್ಧುರಿ ವಾದ್ಯಘೋಷ್ಠಿ, ಕಣ್ಮನ ಸಂತೈಸುವ ವಿಶೇಷ ದೀಪಾರಾಧನೆ ನೆರವೇರಿತು.
ದೇವಳದ ಆಡಳಿತ ಮಂಡಳಿ, ಅರ್ಚಕರು ಹಾಗೂ ಹತ್ತು ಸಮಸ್ತರು ಉಪಸ್ಥಿತರಿದ್ದರು.