
ಪಿ. ಸತ್ಯನಾರಾಯಣರಾವ್ ನಿಧನ
Thursday, March 27, 2025
ಮೂಡುಬಿದಿರೆ: ಇಲ್ಲಿಗೆ ಸಮೀಪದ ಪುತ್ತಿಗೆ ಪಳಕಳ ನಿವಾಸಿ ಪಿ. ಸತ್ಯನಾರಾಯಣರಾವ್(72) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಬುಧವಾರ ಬೆಳಗ್ಗೆ ನಿಧನರಾದರು
ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಅವರು ಮಿತ್ತಬೈಲು ಅಂಚೆ ಕಚೇರಿಯಲ್ಲಿ ಸುಮಾರು 35 ವರ್ಷಗಳ ಕಾಲ ಅಂಚೆ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ಯಾನುಭಾಗ ಮನೆತನದವರಾಗಿದ್ದರು.