ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಮಿಲನ’ ಕಾರ್ಯಕ್ರಮ

ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಮಿಲನ’ ಕಾರ್ಯಕ್ರಮ


ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ ‘ಫಿಲೋ ಮಿಲನ-2025’ ಕಾರ್ಯಕ್ರಮವು ಮಾ.8 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಿತು. 


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಜಿರೆ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೋ ಮಾತನಾಡಿ, ಈ ಸಂಸ್ಥೆಯಲ್ಲಿ ಕಲಿತಿರುವ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆದುಕೊಂಡಿದ್ದು, ನಮ್ಮ ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಪ್ರಭಾವ ಸಮಾಜದ ಮೇಲೆ ಪ್ರಬಲವಾಗಿದೆ. ಹಳೆ ವಿದ್ಯಾರ್ಥಿಗಳಿಗೆ ಕಾಲೇಜಿನ ಬಗ್ಗೆ ಅತ್ಯಂತ ಪ್ರೀತಿಯಿದ್ದು, ಪ್ರತಿ ಸಲ ಕಾಲೇಜಿಗೆ ಬರುವಾಗ ಎಲ್ಲಾ ಉಪನ್ಯಾಸಕರನ್ನು ಬೇಟಿಯಾಗುವುದನ್ನು ಮರೆಯುವುದಿಲ್ಲ. ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಹಳೆ ವಿದ್ಯಾರ್ಥಿಗಳು ಪ್ರಪಂಚದ ಯಾವುದೇ ಬಾಗದಲ್ಲಿದ್ದರೂ ಒಂದೇ ಕುಟುಂಬದ ಸದಸ್ಯರಂತೆ ಪ್ರೀತಿಯಿಂದ ಒಬ್ಬರನ್ನೊಬ್ಬರು ಸ್ವಾಗತಿಸುತ್ತಾ ಪ್ರತಿಯೊಬ್ಬರ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡಿ ಎಂದು ಹೇಳಿದರು.


ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್ ಮಾತನಾಡಿ, ಯಾವುದೇ ಸಂಸ್ಥೆಯ ಅಭಿವೃದ್ಧಿಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ. ಇಂದು ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ. ಹಳೆ ವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ಇಲ್ಲಿಯ ಪ್ರಸಕ್ತ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಪ್ರಯತ್ನ ಸೇರಿ ಸಂಸ್ಥೆಯು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.


ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಪ್ರತಿಮಾ ಹೆಗ್ಡೆ ಹಾಗೂ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಡಾ. ಪ್ರಕಾಶ್ ಬಿ.  ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.


ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ’ಕೋಸ್ಟಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಸಂಚಾಲಕರು, ಉಪನ್ಯಾಸಕ ಭರತ್ ಕುಮಾರ್ ಉಪಸ್ಥಿತರಿದ್ದು, ಹಿರಿಯ ವಿದ್ಯಾರ್ಥಿ ಸಂಘದ ನೂತನ ಸಮಿತಿ ರಚಿಸಲು 15 ಮಂದಿಯ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಹನ್ನೊಂದು ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸುಧೀರ್ಘ ಸೇವೆಯನ್ನು ಸಲ್ಲಿಸಿದ ರೆ. ಫಾ ವಿಜಯ್ ಲೋಬೋ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. 

ಹಿರಿಯ ವಿದ್ಯಾರ್ಥಿಗಳು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮನೋರಂಜನಾ ಆಟೋಟಗಳನ್ನು ನಡೆಸಿ ಕೊಟ್ಟರು.

ಕಾಲೇಜಿನ ಹಿರಿಯ ವಿದ್ಯಾರ್ಥಿ ವೃಂದ ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕ ಸಂದೇಶ್ ಜೋನ್ ಲೋಬೋ ವಂದಿಸಿ, ಹಿರಿಯ ವಿದ್ಯಾರ್ಥಿನಿ ಶ್ರೀದೇವಿ. ಕೆ ಕಾರ್ಯಕ್ರಮವನ್ನು ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article