
ನಾಳೆ ಯುವನಿಧಿ ನೋಂದಣಿ ಶಿಬಿರ ಹಾಗೂ ಸಂವಾದ ಕಾರ್ಯಕ್ರಮ
Friday, March 7, 2025
ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಹಯೋಗದೊಂದಿಗೆ ಯುವನಿಧಿ ನೋಂದಣಿ ಶಿಬಿರ ಹಾಗೂ ಸಂವಾದ ಕಾರ್ಯಕ್ರಮವು ಮಾರ್ಚ್ 8 ರಂದು ಬೆಳಿಗ್ಗೆ 11 ಗಂಟೆಗೆ ಸಂತ ಫಿಲೋಮಿನಾ ಕಾಲೇಜಿನ ಎಸ್‌ಜೆಎಂ ಹಾಲಿನಲ್ಲಿ ನಡೆಯಲಿದೆ.
ಈ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು ಇದರ ಅಧ್ಯಕ್ಷ ಉಮಾನಾಥ ಶೆಟ್ಟಿ ಇವರು ಉಪಸ್ಥಿತರಿರಲಿರುವರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಇವರು ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ 2022-24ರಲ್ಲಿ ತಮ್ಮ ಪದವಿ ಅಥವಾ ಡಿಪ್ಲೊಮಾ ಕೋರ್ಸ್ನಲ್ಲಿ ಉತ್ತೀರ್ಣರಾದ ನಿರುದ್ಯೋಗಿ ಯುವಕ/ಯುವತಿಯರಿಗೆ ಯುವ ನಿಧಿ ಯೋಜನೆಗೆ ನೋಂದಣಿ ಮಾಡಲು ಅವಕಾಶವಿದೆ ಎಂದು ಕಾಲೇಜಿನ ಪ್ರಕಟಣೆಯು ತಿಳಿಸಿದೆ.