
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
Tuesday, March 18, 2025
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ರಕ್ಷಕ ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ವಾರ್ಷಿಕ ಮಹಾಸಭೆಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ಅಬ್ದುಲ್ ಕುನ್ನಿ, ಉಪಾಧ್ಯಕ್ಷರಾಗಿ ವೈಲೆಟ್ ಪಿಂಟೋ ಆಯ್ಕೆಯಾದರು. ನೂತನ ಅಧ್ಯಕ್ಷರು ಸಂಸ್ಥೆಯ ಸ್ವಾಯತ್ತತೆ ಮಾನ್ಯತೆಗೆ ಶುಭ ಹಾರೈಸಿ ಅಭಿವೃದ್ಧಿಯ ಕಾಯಕದಲ್ಲಿ ಶ್ರಮಿಸುದಾಗಿ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟೋನಿ ಪ್ರಕಾಶ್ ಮೊಂತೇರೊ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.