
ಶಿರ್ವ ಪ್ರಿನ್ಸ್ ಪಾಂಟ್ ಬಳಿ ಬೈಕ್ ಸ್ಕಿಡ್ ಆಗಿ ಸವಾರ ಸಾವು
Sunday, March 2, 2025
ಶಿರ್ವ: ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಿನ್ಸ್ ಪಾಂಟ್ ಬಳಿ ಶನಿವಾರ ಬೈಕ್ ಸ್ಕಿಡ್ ಆದ ಪರಿಣಾಮ ಬೈಕ್ ಸವಾರ ವಿಪರೀತ ರಕ್ತಸ್ರಾವವಾಗಿ ಆಸ್ಪತ್ರೆಗೆ ಸೇರಿಸುವಷ್ಟರಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಶಿರ್ವ ಇಂದ್ರಪುರ ನಿವಾಸಿ ವಿಠಲ ಶೆಟ್ಟಿ(54) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದ್ದು, ಇವರು ಬೆಳ್ಮಣ್‌ನಿಂದ ಶಿರ್ವದ ಕಡೆಗೆ ಬರುತ್ತಿದ್ದಾಗ ಹತೋಟಿ ತಪ್ಪಿ ರಸ್ತೆಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಬೆಳ್ಮಣ್ ವೈನ್ ಶೋಪ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.