
ದ್ವಿಚಕ್ರ ಚಲಾಯಿಸಿದ ಅಪ್ರಾಪ್ತ ಬಾಲಕ: ಪೋಷಕರಿಗೆ ದಂಡ
Tuesday, March 11, 2025
ಸುಳ್ಯ: ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯ ಪರಿಸರದಲ್ಲಿ ಬಾಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಸುಳ್ಯ ಪೊಲೀಸರು ತಡೆ ಹಿಡಿದು ಪ್ರಕರಣ ದಾಖಲಿಸಿದ್ದರು.
ಸುಳ್ಯ ನ್ಯಾಯಾಲಯ ಬಾಲಕನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಬಾಲಕನಿಗೆ ವಾಹನ ಚಾಲನೆ ಮಾಡಲು ನೀಡಿದ್ದಕ್ಕಾಗಿ ಸುಳ್ಯ ಪಿಎಸ್‌ಐ ಸಂತೋಷ್ ಬಿ.ಪಿ. ಅವರು ವಾಹನ ಮಾಲಕರ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿಯನ್ನು ಸಲ್ಲಿಸಿದ್ದಾರೆ.