
ಹೆಚ್.ಐ.ವಿ ಏಡ್ಸ್ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮ
Thursday, March 20, 2025
ಉಡುಪಿ: ಡಾ. ಜಿ. ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಅಜ್ಜರಕಾಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ, ಐ.ಕ್ಯೂ.ಎ.ಸಿ, ರೆಡ್‌ರಿಬ್ಬನ್ ಕ್ಲಬ್ ಮತ್ತು ಉಡುಪಿ ಜಿಲ್ಲಾ ಏಡ್ಸ್ ನಿಂಯತ್ರಣ ಹಾಗೂ ತಡೆಗಟ್ಟುವ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಹೆಚ್.ಐ.ವಿ ಏಡ್ಸ್ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಯು.ಜಿ. ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದ ಜಿಲ್ಲಾ ಅಧೀಕ್ಷಕರು, ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕದ ಮಹಾಬಲೇಶ್ವರ ಬಿ. ಮಾತನಾಡಿ, ಉಡುಪಿ ಜಿಲ್ಲೆಯನ್ನು ಏಡ್ಸ್ ಮುಕ್ತ ಜಿಲ್ಲೆಯನ್ನಾಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಹೆಚ್.ಐ.ವಿ ಏಡ್ಸ್‌ನ೦ತಹ ಮಹಾಮಾರಿ ಖಾಯಿಲೆಯ ಕುರಿತು ಯುವ ಜನರಲ್ಲಿ ಅರಿವು ಮತ್ತು ಜಾಗೃತಿ ಇರುವುದು ಬಹು ಮುಖ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆಸರೆ ಫೌಂಡೇಶನ್‌ನ ಸಂಜೀವ ವಂಡ್ಸೆ ಮುಖ್ಯ ಅಥಿತಿಯಾಗಿ ಸಪಸ್ಥಿತರಿದ್ದು ತಮ್ಮ ಜೀವನದ ಅನುಭವವನ್ನು ವಿದ್ಯಾರ್ಥಿನಿಯರೊಂದಿಗೆ ಹಂಚಿಕೊ೦ಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ಕೆ. ವಹಿಸಿದ್ದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ. ನಿಕೇತನಾ ಪ್ರಸ್ತಾವಿಕವಾಗಿ ಮಾತನಾಡಿ, ಅಥಿತಿಗಳನ್ನು ಸ್ವಾಗತಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಡಿ. ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.