
ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ
Thursday, March 27, 2025
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ’ ಎಂಬ ವಿಷಯ ಕುರಿತು ಮಾ.22 ರಂದು ಅಂತರ್ ಕಾಲೇಜು ಕಾರ್ಯಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಎನ್‌ಐಟಿಕೆಯ ನಿರ್ದೇಶಕ ಪ್ರೊ. ರವಿ ಮಾತನಾಡಿ, ಶಿಕ್ಷಕರು ಅದ್ಯಾಪನದೊಂದಿಗೆ ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಬೋಧನಾ ಸಾಮರ್ಥ್ಯ ಹೆಚ್ಚಾಗುವುದು ಎಂದರು ಹಾಗೂ ಉತ್ತಮ ಸಂಶೋಧನಾ ಪ್ರಸ್ತಾವನೆಗಳನ್ನು ವಿವಿಧ ಅನುದಾನ ನೀಡುವ ಸಂಸ್ಥೆಗಳಿಗೆ ಸಲ್ಲಿಸವ ಬಗ್ಗೆ ಮಾಹಿತಿ ನೀಡಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕ ಡಾ. ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ ಸ್ವಾಗತಿಸಿ, ವಂದಿಸಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಪ್ರಾಧ್ಯಾಪಕರು ಭಾಗವಹಿಸಿದರು.