
15 ಅಡಿ ಕಂದಕಕ್ಕೆ ಉರುಳಿದ ಕಾರು
Monday, March 17, 2025
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು-ಕಲ್ಲಾಪು ಬಳಿಯ ನೇತ್ರಾವತಿ ನದಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಮಾ.17ರಂದು ನಡೆದಿದೆ.
ಐವರು ಯುವಕರಿದ್ದ ಕಾರು 15 ಫೀಟ್ ಆಳಕ್ಕೆ ಉರುಳಿ ಬಿದ್ದ ಘಟನೆ ತೊಕ್ಕೊಟ್ಟು ಸಮೀಪದ ರಾ.ಹೆ. ಕಲ್ಲಾಪು ಸಮೀಪ ಸಂಭವಿಸಿದೆ.
ತಲಪಾಡಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಐವರು ಯುವಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣ ದಾಖಲಾಗಿದೆ.