
ಸೂಲಿಬೆಲೆ ವಿರುದ್ಧ ದೂರು
Thursday, March 13, 2025
ಉಳ್ಳಾಲ: ದಿಗಂತ್ ನಾಪತ್ತೆ ಪ್ರಕರಣದಲ್ಲಿ ಜಿಲ್ಲೆಯ ವಾತಾವರಣವನ್ನು ಕೆಡಿಸಲು ಯತ್ನಿಸಿದ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿಯೂ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸಲು ಯತ್ನಿಸಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಬಂಟ್ವಾಳ ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಸ್ ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಯಿಂದ ದೂರು ದಾಖಲಿಸುತ್ತಿದ್ದು, ರಾಜ್ಯ ಸರಕಾರವೂ ಕಠಿಣ ಕಾಯಿದೆಗಳಡಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಎಸ್ ಡಿಪಿಐ ಫರಂಗಿಪೇಟೆ ಬ್ಲಾಕ್ ಕಾರ್ಯದರ್ಶಿ, ಪುದು ಗ್ರಾಮ ಪಂಚಾಯತ್ ಸದಸ್ಯ ಮೊಹಮ್ಮದ್ ಶಾಫಿ ಹೇಳಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮ್ಮೆಮ್ಮಾರ್ ದಿಗಂತ್ ನಾಪತ್ತೆ ಪ್ರಕರಣದಲ್ಲಿ ಸಂಘಪರಿವಾರ ಹಾಗೂ ಬಿಜೆಪಿ ಮುಖಂಡರು, ಶಾಸಕರ ವಿರುದ್ಧ ರಾಜ್ಯ ಸರಕಾರ ಹಾಗೂ ಕೊರಗಜ್ಜನ ಕಡೆ ನಮ್ಮ ನಡೆ ಪ್ರಕರಣದಲ್ಲಿ ಚಕ್ರವರ್ತಿ ಸೂಲಿಬೆಲೆ ಪ್ರಚೋದನಾತ್ಮಕ ಹೇಳಿಕೆಯನ್ನು ನೀಡಿರುವ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು.