
ಉಪಕಾರದ ಕೆಲಸ ನಿರಂತರವಾಗಲಿ: ಕ್ಯಾ. ಬ್ರಿಜೇಶ್ ಚೌಟ
ವಿಟ್ಲ: ಸಮಾಜಕ್ಕೆ ಉಪಕಾರ ಆಗುವ ಕೆಲಸ ನಿರಂತರವಾಗಿ ನಡೆಯಬೇಕು. ಶಾಲೆ, ಆರೋಗ್ಯ ಕೇಂದ್ರ, ದೇವಸ್ಥಾನ, ಸ್ಮಶಾನದ ವಿಚಾರದಲ್ಲಿ ಒಗ್ಗೂಡುವ ಅಗತ್ಯವಿದೆ. ಗ್ರಾಮದಲ್ಲಿ ಎಲ್ಲರೂ ಸೇರಿ ಮಾಡುವ ಕೆಲಸವನ್ನು ಶ್ಲಾಘಿಸಬೇಕು. ಜಾತಿಯ ಹೆಸರಿನಲ್ಲಿ ಸಮಾಜ ಒಡೆಯುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.
ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಪುಣಚ ಗ್ರಾಮ ಪಂಚಾಯಿತಿ, ಹಿಂದು ರುದ್ರಭೂಮಿ ಅಭಿವೃದ್ಧಿ ಸಮಿತಿ ವತಿಯಿಂದ ಹಿಂದು ರುದ್ರಭೂಮಿ ಕಟ್ಟಡದ ಲೋಕಾರ್ಪಣೆ ಮಾಡಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿ, ಜೀವನದಲ್ಲಿ ಜಾತಿ ಮತವನ್ನು ಮೀರಿ ನಿಲ್ಲುವ ಕಾರ್ಯವಾಗಬೇಕು. ಸ್ಮಶಾನ ಎಂಬುದು ದೇವರ ವಾಸ ಸ್ಥಾನ ಎಂದು ತಿಳಿದು ಕೆಲಸ ನಡೆಯಬೇಕು. ಜೀವನದಲ್ಲಿ ಮಾಡುವ ಉತ್ತಮ ಕಾರ್ಯಗಳು ಶಾಶ್ವತವಾಗಿ ಉಳಿಯುತ್ತವೆ. ಅನುದಾನದಲ್ಲಿ ಹೆಚ್ಚಿನ ಭಾಗವನ್ನು ಪುಣಚಕ್ಕೆ ನೀಡಲು ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ಪುಣಚ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೇಬಿ ಪಟಿಕಲ್ಲು, ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಸದಸ್ಯ ರವಿ ಬಿ.ಕೆ., ಅಜ್ಜಿನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಽಕಾರಿ ಡಾ.ರಂಶೀಲಾ, ರುದ್ರಭೂಮಿ ಅಧ್ಯಕ್ಷ ಪ್ರೀತಂ ಪೂಂಜ ಎ. ಉಪಸ್ಥಿತರಿದ್ದರು.
ಪಂಚಾಯಿತಿ ಉಪಾಧ್ಯಕ್ಷ ಮಹೇಶ್ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಪಂಚಾಯಿತಿ ಅಭಿವೃದ್ಧಿ ಅಽಕಾರಿ ರವಿ ವಂದಿಸಿದರು. ಜಗನ್ನಾಥ ಸಂಕೇಶ ಕಾರ್ಯಕ್ರಮ ನಿರೂಪಿಸಿದರು.