
ಪುರಸಭೆಯ ಕಂಚಿನಡ್ಕ ಪದವಿನಲ್ಲಿರುವ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ
Tuesday, April 15, 2025
ಬಂಟ್ವಾಳ: ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿರುವ ಬಂಟ್ವಾಳ ಪುರಸಭೆಯ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಸಿತ್ಯಾಜ್ಯದಿಂದ ತಯಾರಿಸಿರುವ ಗೊಬ್ಬರ, ಹಸಿತ್ಯಾಜ್ಯದಿಂದ ತಯಾರಿಸಲು ಉದ್ಧೇಶಿಸಿರುವ ಬಯೋಗ್ಯಾಸ್ ತಯಾರಿ ಘಟಕ ಮತ್ತು ಒಣತ್ಯಾಜ್ಯದಿಂದ ಮರುಬಳಕೆ, ಮರುಉಪಯೋಗಕ್ಕೆ ಯೋಗ್ಯವಾದ ವಸ್ತುಗಳನ್ನು ವಿಂಗಡಿಸಿ ಸಂಗ್ರಹಿಸಿಡುವುದು, ಆರ್‌ಡಿಎಫ್ ಸಿಮೆಂಟ್ ಕಾರ್ಖಾನೆಗೆ ಕಳುಹಿಸಲು ಸಂಗ್ರಹಿಸಿರುವುದನ್ನು ಪರಿಶೀಲಿಸಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಂಗಳೂರು ಮಹಾನಗರಪಾಲಿಕೆಯ ಆಯುಕ್ತ ರವಿಚಂದ್ರ ನಾಯ್ಕ್, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಎಂ.ಡಿ. ರಾಜು ಕೆ., ಬಂಟ್ವಾಳ ಪುರಸಭೆಯ ಅಧ್ಯಕ್ಷ ವಾಸುಪೂಜಾರಿ ಲೊರೆಟ್ಟೊ, ಮುಖ್ಯಾಧಿಕಾರಿ ರೇಖಾ ಶೆಟ್ಟಿ, ಹಿರಿಯ ಆರೋಗ್ಯ ನಿರೀಕ್ಷಕ ರತ್ನಪ್ರಸಾದ್, ಸಮುದಾಯ ಸಂಘಟಕರಾದ ಉಮಾವತಿ, ಪುರಸಭೆಯ ಒಣತ್ಯಾಜ್ಯ ನಿರ್ವಹಣೆಯ ಅಭಿಲಾಷ್ ಮತ್ತಿತರರು ಉಪಸ್ಥಿತರಿದ್ದರು.