
ಅಪಘಾತ: ಯುವಕರಿಬ್ಬರು ಸಾವು
Saturday, April 12, 2025
ಬೆಳ್ತಂಗಡಿ: ನಾರಾವಿ ಕುತ್ಲೂರಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದವರನ್ನು ಪ್ರಶಾಂತ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ.
ಕುತ್ಲೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಪರಿಣಾಮ ಇಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ರಾತ್ರಿಯ ವೇಳೆ ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ವೇಳೆ ರಾತ್ರಿ ಹನ್ನೆರಡು ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ.
ವೇಣೂರು ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.