
ಮಹಾವೀರ ಜನ್ಮ ಕಲ್ಯಾಣೋತ್ಸವ
Friday, April 11, 2025
ಧರ್ಮಸ್ಥಳ: ಮಹಾವೀರ ಜಯಂತಿಯ ಸಂದರ್ಭದಲ್ಲಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು.
ಭವ್ಯ ಮೆರವಣಿಗೆಯೊಂದಿಗೆ ಆರಂಭಗೊಂಡ ಈ ಧಾರ್ಮಿಕ ಕಾರ್ಯಕ್ರಮದಲ್ಲಿ, ತೀರ್ಥಂಕರರಿಗೆ ವಿಶೇಷ ಅಭಿಷೇಕ ಮತ್ತು ಅಷ್ಟವಿಧಾರ್ಚನೆ ಪೂಜೆಗಳನ್ನು ಸಲ್ಲಿಸಲಾಯಿತು. ಬಳಿಕ, ಬಾಲ ತೀರ್ಥಂಕರನಿಗೆ ವೈಭವಯುತವಾದ ನಾಮಕರಣೋತ್ಸವವನ್ನು ಆಚರಿಸಲಾಯಿತು.
ಹೇಮಾವತಿ ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.