ಉಗ್ರರ ಹೇಯ ಕೃತ್ಯ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ: ಶುಭದರಾವ್

ಉಗ್ರರ ಹೇಯ ಕೃತ್ಯ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ: ಶುಭದರಾವ್

ಕಾರ್ಕಳ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ದುರಾದೃಷ್ಟಕರ, ಈ ದಾಳಿಯನ್ನು ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತಾ ದಾಳಿಯಲ್ಲಿ ಮಡಿದ ಕರ್ನಾಟಕದ ಇಬ್ಬರು ಸೇರಿ ಇತರ ಸಹೋದರರಿಗೆ ಶೃದ್ದಾಂಜಲಿಯನ್ನು ಸಲ್ಲಿಸುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಗ್ರರ ದಮನಕ್ಕೆ ಕೇಂದ್ರ ಸರಕಾರ ತಕ್ಷಣ ಕಾರ್ಯ ಪ್ರವೃತ್ತವಾಗಬೇಕು ಸರಕಾರ ತೆಗೆದುಕೊಳ್ಳುವ ಯಾವುದೇ ಕಾನೂನಾತ್ಮಕ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ ಎಂದು ತಿಳಿಸಿದ್ದಾರೆ.

ಆದರೆ ಸರಕಾರದ ವೈಫಲ್ಯವನ್ನು ಮೆರೆ ಮಾಚಲು ಸಾಧ್ಯವಿಲ್ಲ ಗಡಿಯಲ್ಲಿ ಉಗ್ರರ ದಾಳಿಯನ್ನು ತಡೆಯಲು ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ, ಇದು ಗೃಹ ಇಲಾಖೆಯ ಗಂಭೀರ ವೈಫಲ್ಯವನ್ನು ತೋರಿಸುತ್ತದೆ. 2000 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಒಂದೇ ಕಡೆ ಸೇರಿದ್ದರೂ ಒಬ್ಬನೇ ಒಬ್ಬ ಭದ್ರತಾ ಸಿಬ್ಬಂದಿ ಇಲ್ಲದಿರುವುದು ಭದ್ರತಾ ಲೋಪವಲ್ಲದೆ ಬೇರೇನೂ ಅಲ್ಲ, ಇವರ ಆರ್ಭಟ ಆಕ್ರೋಶಗಳು ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಯಿತು ಎಂದೆನಿಸುತ್ತದೆ ಬೇರೆ ಸರಕಾರಗಳು ಆಡಳಿತ ನಡೆಸುವಾಗ ಉಗ್ರರ ದಾಳಿಗಳಾದಾಗ ರಾಜೀನಾಮೆ ಕೇಳುತ್ತಿದ್ದವರು ಮೌನವಾಗಿದ್ದಾರೆ ಎಂದರು.

ಸುರಕ್ಷತಾ ಲೋಪಗಳಿಗೆ ಕೇಂದ್ರ ಸರ್ಕಾರವು ಸಾರ್ವಜನಿಕರಿಗೆ ಉತ್ತರಿಸಬೇಕು ಪ್ರಧಾನಿಯವರ 56 ಇಂಚಿನ ಎದೆಯ ಶಕ್ತಿ ಏನೆಂಬುದು ದೇಶಕ್ಕೆ ತೋರಿಸುವ ಕಾಲ ಬಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article