ಸ್ವಯಂ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಸ್ವಯಂ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ


ಕಾರ್ಕಳ: ತನ್ನ ಕಾರಿನಲ್ಲೇ ವಿಷ ಸೇವಿಸಿ, ತಾನೇ ತನ್ನ ಎದೆಗೆ ಗುಂಡು ಹಾರಿಸಿಕೊಂಡು ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ.


ಮೃತರನ್ನು ಕಾರ್ಕಳದ ಉದ್ಯಮಿ, ಕಾರ್ಕಳ ಪುರಸಬೆಯ ಮಾಜಿ ಉಪಾಧ್ಯಕ್ಷ ದಿಲೀಪ್ ಎನ್.ಆರ್. ಎಂದು ಗುರುತಿಸಲಾಗಿದೆ.


ಕಾರ್ಕಳ ತೆಳ್ಳಾರು ರಸ್ತೆ ನಿವಾಸಿಯಾಗಿದ್ದು ದಿಲೀಪ್ ಎನ್.ಆರ್. ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದರೆನ್ನಲಾಗಿದೆ.


ಮಂಗಳೂರು, ಮುಂಬೈ ಹಾಗೂ ಹೈದರಾಬಾದ್ ನಲ್ಲಿ ಹೋಟೆಲ್ ಉದ್ಯಮ ನಡೆಸಿದ್ದರು ಉದ್ಯಮದಲ್ಲಿ ನಷ್ಟವನ್ನು ಕೂಡ ಅನುಭವಿಸಿದ್ದು ಕಾಯಿಲೆ ಉಲ್ಬಣಗಳ್ಳುತ್ತಿರುವ ಹಿನ್ನಲೆಯಲ್ಲಿ ಮಾನಸಿಕವಾಗಿ ತುಂಬಾ ನೊಂದಿದ್ದರೆನ್ನಲಾಗಿದೆ.


ಸೋಮವಾರ ರಾತ್ರಿ ತನ್ನ ಸ್ಹೇಹಿತರಿಗೆ ಹಾಗೂ ಆಪ್ತರಿಗೆವಾಟ್ಸಪ್ನಲ್ಲಿ ನಾನು ನಿಮ್ಮನ್ನು ಬಿಟ್ಟು ದೂರ ಹೋಗುತ್ತಿದ್ದೇನೆ ಎಂದು ಮೇಸೇಜ್ ಕಳುಹಿಸಿದ್ದರು.


ಕಾರ್ಕಳ ಮೂಲದ ಮುಂಬೈಯ ಉದ್ಯಮಿಯೊಬ್ಬರು ಮೇಸೆಜ್ ನೋಡಿ ಮೃತರ ಅಣ್ಣನಿಗೆ ವಿಷಯ ತಿಳಿಸಿದಾಗ ದಿಲೀಪ್ ರನ್ನು ಸಂಪರ್ಕಿಸಲು ಪ್ರಯತ್ನಪಟ್ಟಾಗ ಯಾವುದೇ ಸುಳಿವು ಸಿಗದಿದ್ದಾಗ ಪೋಲಿಸರ ಸಹಾಯದಿಂದ ಹುಡುಕಾಟ ಪ್ರಾರಂಬಿಸಿ ಮೊಬೈಲ್ ನಂಬರ್ ಲೊಕೇಶನ್ ಆಧಾರದಲ್ಲಿ ಹುಡುಕಾಡಿದಾಗ ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಅವರ ಕಾರನ್ನು ಪರಿಶೀಲಿಸಿದಾಗ ದಿಲೀಪ್ ಎನ್.ಆರ್. ವಿಷ ಸೇವಿಸಿ ತನ್ನ ಸರ್ವೀಸ್ ರಿವಾಲ್ವರ್ ನಿಂದ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಕಾರ್ಕಳ ಗ್ರಾಮಾಂತರ ಠಾಣಾ ಪಿಎಸೈ ಪ್ರಸನ್ನ ಕೇಸು ದಾಖಲಿಸಿ  ತನಿಖೆ ನಡೆಸುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article