ಶ್ರೀಮದನಂತೇಶ್ವರ ಸಿದ್ಧಿ ವಿನಾಯಕ ದೇವರ ದರ್ಶನಕ್ಕೆ ಆಗಮಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ದಂಪತಿ

ಶ್ರೀಮದನಂತೇಶ್ವರ ಸಿದ್ಧಿ ವಿನಾಯಕ ದೇವರ ದರ್ಶನಕ್ಕೆ ಆಗಮಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ದಂಪತಿ


ಮಧೂರು: ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಾಲಯದ ಅಷ್ಟಬಂಧ ಬ್ರಹ್ಮಕಲಶ-ಮೂಡಪ್ಪ ಸೇವಾ ಉತ್ಸವದ ನಿಮಿತ್ತ ಶ್ರೀ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ಸಚಿವ ಡಿ.ಕೆ. ಶಿವಕುಮಾರ್ ಪತ್ನಿ ಸಮೇತ ದೇಗುಲಕ್ಕೆ ಭೇಟಿ ನೀಡಿದರು.

ದೇಗುಲದ ಆಡಳಿತ ಮಂಡಳಿಯವರು ವಾದ್ಯ ಘೋಷಗಳೊಂದಿಗೆ ಅವರನ್ನು ಕ್ಷೇತ್ರಕ್ಕೆ ಬರಮಾಡಿಕೊಂಡರು. ಶ್ರೀ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪತ್ನಿ ಸಹಿತ ಡಿ.ಕೆ. ಶಿವಕುಮಾರ್ ಅವರಿಗೆ ಮಾಣಿಲ ಶ್ರೀಧಾಮದ ಪರಮಪೂಜ್ಯ ಶ್ರೀ ಯೋಗಿ ಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮೀಜಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ಡಿಕೆಶಿ: 

ದೇಗುಲದ ಭೇಟಿ ಸಂದರ್ಭದಲ್ಲಿ ಎದುರಿಗೆ ಸಿಕ್ಕ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರಿಗೆ ಕೈಮುಗಿದು ವಂದಿಸಿದ ಡಿ.ಕೆ. ಶಿವಕುಮಾರ್ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article