ಏ.12 ರಂದು ಸುಬ್ರಹ್ಮಣ್ಯ ರೈಲಿಗೆ ಚಾಲನೆ

ಏ.12 ರಂದು ಸುಬ್ರಹ್ಮಣ್ಯ ರೈಲಿಗೆ ಚಾಲನೆ

ಮಂಗಳೂರು: ಏ.12 ರಂದು ಸಂಜೆ 4 ಗಂಟೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸುಬ್ರಹ್ಮಣ್ಯ ಮಾರ್ಗ ವರೆಗಿನ ವಿಸ್ತರಣೆಯ ಈ ವಿಶೇಷ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಈ ಸಂದರ್ಭ ಜಿಲ್ಲೆಯ ಜನಪ್ರತಿನಿಧಿಗಳು, ರೈಲ್ವೆ ವಿಭಾಗಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಗುರುವಾರ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೈಲು ವಿಸ್ತರಣೆಯಿಂದ ಕುಕ್ಕೆ ಸುಬ್ರಹ್ಮಣ್ಯ ಯಾತ್ರಾರ್ಥಿಗಳಿಗೆ ಮಾತ್ರವಲ್ಲ ಮಂಗಳೂರಿಗೆ ತೆರಳುವ ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ಸಹಕಾರಿಯಾಗಲಿದೆ. ಕಡಿಮೆ ವೆಚ್ಚದಲ್ಲಿ ಪ್ರಯಾಣಿಸಲು ಸಾಧ್ಯವಾಗಲಿದೆ ಎಂದರು.

ಮ್ಯಾಟ್ ವಿತರಣೆ..

ಕ್ರೀಡಾ ಭಾರತಿ ದ.ಕ. ಜಿಲ್ಲೆ ಮತ್ತು ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಹನುಮಾನ್ ಜಯಂತಿ ಪ್ರಯುಕ್ತ ಸಂಸದರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಎನ್‌ಎಂಪಿಎ ಇದರ ಸಿಎಸ್‌ಆರ್ ನಿಧಿಯಡಿ ಕೊಡಮಾಡುವ ಕಬಡ್ಡಿ ಮ್ಯಾಟ್ ವಿತರಣಾ ಸಮಾರಂಭ ಏ.13ರಂದು ಬೆಳಗ್ಗೆ 9.30ಕ್ಕೆ ಬಿ.ಸಿ.ರೋಡ್ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ನಾಗರಾಜ ಶೆಟ್ಟಿ, ಎನ್‌ಎಂಪಿಎ ಅಧ್ಯಕ್ಷ ಡಾ.ವೆಂಕಟರಮಣ ಅಕ್ಕರಾಜು ಭಾಗವಹಿಸುವರು ಎಂದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article