ದೇಶ ವಿರೋಧಿ ಪೋಸ್ಟ್ ಹಾಕಿದ ವೈದ್ಯೆ: ಎಫ್‌ಐಆರ್ ದಾಖಲು, ಆಸ್ಪತ್ರೆಯಿಂದ ವಜಾ

ದೇಶ ವಿರೋಧಿ ಪೋಸ್ಟ್ ಹಾಕಿದ ವೈದ್ಯೆ: ಎಫ್‌ಐಆರ್ ದಾಖಲು, ಆಸ್ಪತ್ರೆಯಿಂದ ವಜಾ

ಮಂಗಳೂರು: ನಗರದ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆಯೊಬ್ಬಳು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಿಂದೂ ಧರ್ಮ ಹಾಗೂ ದೇಶ ವಿರೋಧಿ ಪೋಸ್ಟ್ ಮಾಡಿದ್ದು, ಆಕೆಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆಸ್ಪತ್ರೆಯಿಂದ ವಜಾಗೊಳಿಸಿದ್ದಾರೆ.

ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಡೈಟೀಶನ್ ಆಗಿರುವ ಅಫೀಫಾ ಫಾತೀಮಾರಿಂದ ವಿವಾದಾತ್ಮಕ ಪೋಸ್ಟ್ ಹಾಕಿದ್ದಾಳೆ.

HELP STINKY HINDUS BEHIMD ME (ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ).AM I INDIAN- YES, DO I HATE INDIA? YES,  (ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ) ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಳು.

ಅಫೀಫಾ ಫಾತಿಮಾ ಈ ವಿವಾದಾತ್ಮಕ ಪೋಸ್ಟ್ ವಿರುದ್ಧ ಭಾರೀ ಆಕ್ರೋಶ ಭುಗಿಲೆದ್ದಿತ್ತು. ಆಕೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬಂದಿತ್ತು. ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಹೈಲ್ಯಾಂಡ್ ಆಸ್ಪತ್ರೆಯ ಆಡಳಿತ ಮಂಡಳಿ ಅಫೀಫಾಳನ್ನು ಸೇವೆಯಿಂದ ವಜಾಗೊಳಿಸಿದೆ.

ಹೈಲ್ಯಾಂಡ್ ಆಸ್ಪತ್ರೆಯ ಹೆಚ್‌ಆರ್ ಮಹಮ್ಮದ್ ಅಸ್ಲಾಂ ಅವರು ಅಫೀಫ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ನೀಡಿದ ಹಿನ್ನೆಲೆಯಲ್ಲಿ ವಿವಾದಾತ್ಮಕ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫೀಫ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ BNS ಕಲಂ 196(1)(a), 353(2) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article