
ನಾರಾಯಣಗುರುಗಳ ಸಂದೇಶ ಪ್ರಸ್ತುತ ಎಂದು ಪೋಪ್ ಫ್ರಾನ್ಸಿಸ್ ಪ್ರತಿಪಾದಿಸಿದ್ದರು
ಮಂಗಳೂರು: ಕ್ರೈಸ್ತ ಸಮುದಾಯದ ಪ್ರಭಾವಿ ಧರ್ಮಗುರು ಹಾಗೂ ರೋಮನ್ ಕೆಥೊಲಿಕ್ ಚರ್ಚ್ ಮುಖ್ಯಸ್ಥರೂ ಆಗಿರುವ ಪೋಪ್ ಫ್ರಾನ್ಸಿಸ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
ವಿಶ್ವ ಶಾಂತಿಗಾಗಿ ಅವರ ಕೊಡುಗೆ ಅಪಾರ. ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಭೆಯಲ್ಲಿ ಪೋಪ್ ಅವರು ತಮ್ಮ ಆಶೀರ್ವಚನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳನ್ನು ಸ್ಮರಿಸಿದ್ದರು.
ರಾಷ್ಟ್ರಗಳು ಮತ್ತು ವ್ಯಕ್ತಿಗಳ ನಡುವೆ ಅಸಹಿಷ್ಣುತೆ ಮತ್ತು ದ್ವೇಷ ಹೆಚ್ಚುತ್ತಿರುವ ಈ ಕಾಲದಲ್ಲಿ ಗುರುಗಳ ಸಂದೇಶವು ಬಹಳ ಪ್ರಸ್ತುತ. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ಅಗ್ರಸ್ಥಾನದಲ್ಲಿ ಬರುತ್ತಾರೆ ಎಂದು ಪ್ರತಿಪಾದಿಸಿದ್ದರು.
ಈ ಪ್ರಪಂಚದಲ್ಲಿ ಎಲ್ಲರೂ ಸಹೋದರರು ಎಂದು ಪ್ರತಿಪಾದಿಸಿದ್ದರು. ವಿಶ್ವಗುರುವಾಗಿ ಅವರು ಕಳೆದ ಹನ್ನೆರಡು ವರ್ಷಗಳಲ್ಲಿ ಅನೇಕ ಸುಧಾರಣೆಗಳನ್ನು ಕೈಗೊಂಡಿದ್ದರು. ಧರ್ಮಗುರುಗಳ ನಿಧನದಿಂದ ಶೋಕಸಾಗರದಲ್ಲಿ ಮುಳುಗಿರುವ ಎಲ್ಲ ಶಿಷ್ಯವರ್ಗಕ್ಕೂ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಪ್ರಾರ್ಥಿಸುತ್ತೇನೆ ಎಂದು ಪ್ರಕಟಣೆಯಲ್ಲಿ ಸಂತಾಪ ಸೂಚಿಸಿದ್ದಾರೆ.