ಕುಡುಪುನಲ್ಲಿ ಗುಂಪು ಹತ್ಯೆ: ಮತ್ತೆ ಐವರ ಸೆರೆ

ಕುಡುಪುನಲ್ಲಿ ಗುಂಪು ಹತ್ಯೆ: ಮತ್ತೆ ಐವರ ಸೆರೆ

ಮಂಗಳೂರು: ನಗರದ ಕುಡುಪುವಿನ ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ನಡೆದ ಗುಂಪಿನಿಂದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಐವರನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 20ಕ್ಕೆ ಏರಿದೆ. ಯತಿರಾಜ್, ಸಚಿನ್, ಅನಿಲ್, ಸುಶಾಂತ್ ಹಾಗೂ ಆದರ್ಶ್ ಬಂಧಿತ ಐವರು ಆರೋಪಿಗಳು.

ಮೃತನ ಪತ್ತೆ: ಕೇರಳದ ವಯನಾಡು ಜಿಲ್ಲೆಯ ಪುಲ್ಪಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್ ಹತ್ಯೆಗೀಡಾದ ವ್ಯಕ್ತಿ. ಈತನ ಮನೆಯವರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಂದಿಯ ಬಂಧನ ಆಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, "ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ (ಅಪರಾಧ ಸಂಖ್ಯೆ ೩37/2025, ಯು/ಎಸ್ 302 ಐಪಿಸಿ), ಇನ್ನೂ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಜೊತೆಗೆ, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 20ಕ್ಕೆ ಏರಿದೆ. ಇದಲ್ಲದೆ, ಕೊಲೆಯಾದ ವ್ಯಕ್ತಿಯನ್ನು ಅಶ್ರಫ್ ಎಂದು ಗುರುತಿಸಲಾಗಿದೆ. ಈತ ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಲ್ಲಿ ಗ್ರಾಮದ ನಿವಾಸಿ. ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ" ಎಂದು ಹೇಳಿದರು.

ಮೃತದೇಹ ರವಾನೆ..:

ಸ್ಪೀಕರ್ ಯು.ಟಿ. ಖಾದರ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್  ಹಾಗೂ ವಯನಾಡು ಶಾಸಕ ಅಡ್ವಕೇಟ್ ಟಿ. ಸಿದ್ದೀಕ್ ಅವರನ್ನು ಸಂಪರ್ಕಿಸಿದ್ದು,  ತಕ್ಷಣವೇ ರಾತ್ರಿ ಹೊತ್ತಿನಲ್ಲಿ ಮೃತನ ಸಹೋದರ ಅಬ್ದುಲ್ ಜಬ್ಬಾರ್  ಹಾಗೂ ಕುಟುಂಬಸ್ಥರು ಮಂಗಳೂರಿಗೆ ತಲುಪಿ ಮೃತ ದೇಹದ ಗುರುತು ಪತ್ತೆ ಹಚ್ಚಿದ್ದಾರೆ.

ಬಳಿಕ  ಮೃತದೇಹವನ್ನು ಮಂಗಳೂರು ಬಂದರಿನ ಜೀನತ್ ಬಕ್ಷ್  ಜುಮಾ ಮಸೀದಿಯಲ್ಲಿ ಸ್ನಾನ ಮಾಡಿಸಿ, ಮಯ್ಯತ್ತ್ ನಮಾಜಿನ ವಿಧಿ ವಿಧಾನಗಳ ಪೂರ್ತಿಗೊಳಿಸಿ ನಂತರ ಬುಧವಾರ ಮುಂಜಾನೆ 5 ಗಂಟೆಗೆ ಪೊಲೀಸ್ ಜೀಪಿನ ಬೆಂಗಾಲಿನೊಂದಿಗೆ ಕೇರಳಕ್ಕೆ ಕೊಂಡೊಯ್ಯಲಾಯಿತು. 

ಸ್ಪೀಕರ್ ಯು.ಟಿ. ಖಾದರ್ ಅವರ ನಿರ್ದೇಶನದಂತೆ  ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹಲ್ ಹಮೀದ್ ಕೆ.ಕೆ, ಮಾಜಿ ಮೇಯರ್ ಅಶ್ರಫ್.ಕೆ, ಸುಹೈಲ್ ಕಂದಕ್, ಸುನಿಲ್ ಬಜಲಕೇರಿ, ಹರ್ಷಾದ್ ವರ್ಕಾಡಿ,ಲಾರೆನ್ಸ್ ಡಿ’ಸೋಜ, ವಾಹಿದ್ ಕುದ್ರೋಳಿ ಮುಂತಾದವರು ಮುಂಜಾನೆವರೆಗೂ ಸ್ಥಳದಲ್ಲಿದ್ದು ಪ್ರಕ್ರಿಯೆಗಳಿಗೆ ನೆರವಾಗಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article