.jpeg)
ದೇಶವನ್ನು ದುರ್ಬಲಗೊಳಿಸುವ ಶಕ್ತಿಗಳಿಗೆ ಅವಕಾಶ ನೀಡಬಾರದು: ಯು.ಟಿ. ಖಾದರ್
Sunday, April 27, 2025
ಮಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರಗಾಮಿಗಳು ನಡೆಸಿದ ಕೃತ್ಯ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ದೇಶವನ್ನು ದುರ್ಬಲಗೊಳಿಸುವ ಶಕ್ತಿಗಳ ತಂತ್ರವಾಗಿದೆ. ಇಂತಹ ದುಷ್ಟ ಶಕ್ತಿಗಳಿಗೆ ಅವಕಾಶ ನೀಡಬಾರದು. ಅವರನ್ನು ಮಟ್ಟ ಹಾಕಬೇಕು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ.
ಭಾನುವಾರ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ದೇಶದ ಜನರು ಈ ಸಂದರ್ಭದಲ್ಲಿ ಒಗ್ಗಟ್ಟಿನಲ್ಲಿರಬೇಕಾಗಿದೆ. ಕೇಂದ್ರ ಸರಕಾರ ಎಲ್ಲಾ ವಿಪಕ್ಷಗಳನ್ನು ಕರೆದು ತೀರ್ಮಾನಿ ಸಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ಕಾಶ್ಮೀರದ ಉಗ್ರಗಾಮಿಗಳು ಪ್ರವಾಸಿಗರ ಮೇಲೆ ನಡೆಸಿದ ದಾಳಿಯ ಬಗ್ಗೆ ಯು.ಟಿ.ಖಾದರ್ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.