ರೈಲ್ವೆ ಇಲಾಖೆಯ ನರ್ಸಿಂಗ್ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯುವಂತೆ ಪ್ರವೇಶ ಪತ್ರದಲ್ಲಿ ಸೂಚನೆ: ಆದೇಶವನ್ನು ಕೈಬಿಡುವಂತೆ ವಿಶ್ವ ಹಿಂದೂ ಪರಿಷದ್ ಆಗ್ರಹ

ರೈಲ್ವೆ ಇಲಾಖೆಯ ನರ್ಸಿಂಗ್ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯುವಂತೆ ಪ್ರವೇಶ ಪತ್ರದಲ್ಲಿ ಸೂಚನೆ: ಆದೇಶವನ್ನು ಕೈಬಿಡುವಂತೆ ವಿಶ್ವ ಹಿಂದೂ ಪರಿಷದ್ ಆಗ್ರಹ

ಮಂಗಳೂರು: ರೈಲ್ವೆ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆಯು  ಏ.29 ರಂದು ಮಂಗಳವಾರ ಬೋಂದೆಲ್ ನ ಮಣೇಲ್ ಶ್ರೀನಿವಾಸ್ ನಾಯಕ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ನಡೆಯಲಿದ್ದು, ಆ ಪರೀಕ್ಷೆ ಬರೆಯಬೇಕಾದರೆ ಹಿಂದೂಗಳು ಅವರ ಧಾರ್ಮಿಕ ಸೂಚಕಗಳಾದ ಮಂಗಳಸೂತ್ರ, ಜನಿವಾರಗಳನ್ನೂ ತೆಗೆದು ಪರೀಕ್ಷೆ ಬರೆಯುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 

ಈ ರೀತಿಯ ಆದೇಶ ಸರಿಯಲ್ಲ, ಇತ್ತೀಚಿಗೆ CET ಪರೀಕ್ಷೆ ಬರೆಯುವ ಸಂಧರ್ಭದಲ್ಲಿ ಹಿಂದೂಗಳ ಪವಿತ್ರ ಜನಿವಾರವನ್ನು ಕಿತ್ತು ಹಾಕಿರುವುದು ಹಿಂದೂಗಳ ಭಾವನೆಗೆ ಧಕ್ಕೆಯಾಗಿದ್ದು, ಇಡೀ ದೇಶದ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ.

ಮುತ್ತೈದೆ ಹೆಣ್ಣುಮಗಳು ತಾಳಿ ಸರ ಕಳಚುವಂತೆ, ಸಿಂಧೂರ ಅಳಿಸುವಂತೆ ಮಾಡುವುದು, ಪವಿತ್ರ ಜನಿವಾರವನ್ನು ಕಿತ್ತುಹಾಕುವಂತೆ ಹೇಳುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟಾಗುತ್ತದೆ, ಹಿಂದೂ ಬಹುಸಂಖ್ಯಾತ ನಮ್ಮ ದೇಶದಲ್ಲಿ ಈ ರೀತಿಯ ಹಿಂದೂ ವಿರೋಧಿ ಧೋರಣೆ ಸಹಿಸಲು ಅಸಾಧ್ಯ. 

ಹಾಗಾಗಿ ಪರೀಕ್ಷಾರ್ಥಿಗಳಿಗೆ ಯಾವುದೇ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕ್ರಮಕೈಗೊಳ್ಳಲು ವಿಭಾಗ ಪ್ರಚಾರ ಪ್ರಸಾರ ಪ್ರಮುಖ್ ಪ್ರದೀಪ್ ಸರಿಪಲ್ಲ ಜಿಲ್ಲಾಧಿಕಾರಿಗಳಿಗೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article