
ಸ್ಕೂಟರ್ ನಂಬರ್ ಪ್ಲೇಟಿಗೆ ಪ್ಲಾಸ್ಟಿಕ್ ಕಟ್ಟಿ ಸಂಚಾರ: ದಂಡ
Saturday, April 5, 2025
ಮಂಗಳೂರು: ಸ್ಕೂಟರ್‌ನ ನಂಬರ್ ಪ್ಲೇಟಿಗೆ ಪ್ಲಾಸ್ಟಿಕ್ ಕಟ್ಟಿ ಚಲಾಯಿಸಿದ ವ್ಯಕ್ತಿಯನ್ನು ಪೊಲೀಸರು ಪತ್ತೆ ಹಚ್ಚಿದ್ದು, 5,500 ರೂ. ದಂಡ ವಿಧಿಸಿದೆ.
ಮಾ.23 ರಂದು ಸಂಜೆ 4 ಗಂಟೆಯಿಂದ 1.10 ರ ಸುಮಾರಿಗೆ ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮರೆಮಚಿ, ಹೆಲ್ಮೆಟ್ ಧರಿಸದೆ ಬೆಂದೂರ್‌ವೆಲ್, ಕಂಕನಾಡಿ, ಪಂಪ್‌ವೆಲ್‌ನಿಂದಾಗಿ ತೊಕ್ಕೊಟ್ಟು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಣದಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ವೈರಲ್ ಆಗಿದೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ನಗರ ಸಂಚಾರ ಪೊಲೀಸರು ಸ್ಕೂಟರ್ ಹಾಗೂ ಸ್ಕೂಟರ್ ಸವಾರನ ಪತ್ತೆ ಹಚ್ಚಿದ್ದು, ಸಂಚಾರ ನಿಯಮವನ್ನು ಉಲ್ಲಂಘಿಸಿರುವ ಕೆಎ-19-ಟಿಹೆಚ್-1944 ಸ್ಕೂಟರ್‌ನ್ನು ಪತ್ತೆ ಮಾಡಲಾಗಿದೆ.
ಸದ್ರಿ ಸ್ಕೂಟರ್‌ನ ದಾಖಲಾತಿಗಳನ್ನು ಪರಿಶೀಲನೆ ಮಾಡಿ, ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಸವಾರನ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಹೆಲ್ಮೆಟ್ ಧರಿಸದೇ, ನಂಬ್ರ ಪ್ಲೇಟ್ ಮರೆಮಚಿರುವ ಬಗ್ಗೆ ದೋಷಪೂರಿತ ನಂಬರ್ ಪ್ಲೇಟ್ ಬಳಕೆ, ನಿರ್ಲಕ್ಷ್ಯತನದ ಚಾಲನೆ, ಡಿ.ಎಲ್. ಇಲ್ಲದೇ ಚಾಲನೆ ಹಾಗೂ ಮೊಬೈಲ್ ಫೋನ್ ಬಳಕೆಗೆ 5,500 ರೂ. ದಂಡ ವಿಧಿಸಿದೆ.