ಬಲ್ಮಠ ಸರ್ಕಾರಿ ಕಾಲೇಜಿನ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದ ಶಾಸಕ ಕಾಮತ್

ಬಲ್ಮಠ ಸರ್ಕಾರಿ ಕಾಲೇಜಿನ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದ ಶಾಸಕ ಕಾಮತ್


ಮಂಗಳೂರು: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ ಇದರ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಸಂದರ್ಭದಲ್ಲಿ ಇನ್ಫೋಸಿಸ್ ಸಂಸ್ಥೆಯ ಸಿಎಸ್‌ಆರ್ ನಿಧಿಯಿಂದ ಪ್ರೇರಣಾ ಟ್ರಸ್ಟ್ ಸಹಕಾರದೊಂದಿಗೆ ನಿರ್ಮಾಣಗೊಂಡ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್‌ನ್ನು ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕೃತವಾಗಿ ಉದ್ಘಾಟಿಸಿದರು.


ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು, ಈ ಬಾರಿಯ ಕಾಲೇಜಿನ ವಾರ್ಷಿಕೋತ್ಸವದ ಸಂಭ್ರಮವು ಬಹುಕಾಲ ನೆನಪಿನಲ್ಲಿ ಉಳಿಯಲಿದೆ. ನೂತನವಾಗಿ ನಿರ್ಮಾಣಗೊಂಡ ಕಂಪ್ಯೂಟರ್ ಲ್ಯಾಬ್‌ನಿಂದಾಗಿ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯಾಸಂಗಕ್ಕೆ ಅನುಕೂಲವಾಗಲವಾಗಲಿದ್ದು, ಲ್ಯಾಬ್‌ನ ಅಗತ್ಯತೆ ಬಗ್ಗೆ ಇಲ್ಲಿನ ಪ್ರಾಂಶುಪಾಲರು ನನ್ನ ಗಮನಕ್ಕೆ ತಂದ ಮರುಕ್ಷಣವೇ ಈ ಬಗ್ಗೆ ವಿಶೇಷ ಗಮನಹರಿಸಿ ಆದ್ಯತೆಯ ಮೇರೆಗೆ ಅನುಕೂಲ ಮಾಡಿಕೊಡುವಂತೆ ಇನ್ಫೋಸಿಸ್ ಸಂಸ್ಥೆಯನ್ನು ಕೋರಿದ್ದೆ. ಅದರಂತೆ ಇದೀಗ ಪದವಿ ಕಾಲೇಜಿಗೆ 30 ಕಂಪ್ಯೂಟರ್‌ಗಳ ಸಹಿತ ಸುಸಜ್ಜಿತ ಲ್ಯಾಬ್ ನಿರ್ಮಾಣಗೊಂಡಿದ್ದು, ವಿದ್ಯಾರ್ಥಿಗಳಿಗೆ ಒಳಿತಾಗಲಿ ಎಂದು ಹಾರೈಸಿದರು.


ಈ ಸಂದರ್ಭದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕಿ ಪ್ರೊ. ಕೆ.ಆರ್. ಕವಿತ, ಇನ್ಫೋಸಿಸ್‌ನ ಪ್ರಮುಖರಾದ ಸಂದೀಪ್ ಡಿಸಿಲ್ವ, ಪ್ರಾಂಶುಪಾಲ ಪ್ರೊ. ಜಗದೀಶ ಬಾಳ, ಡಾ. ಚಂದ್ರಶೇಖರ ಕೆ., ವಿದ್ಯಾರ್ಥಿ ಪರಿಷತ್ತಿನ ಪ್ರಮುಖರು, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕ-ರಕ್ಷಕ ಸಂಘ, ಹಳೆವಿದ್ಯಾರ್ಥಿ ಸಂಘ, ಬೋಧಕ ಹಾಗೂ ಬೋಧಕೇತರ ವೃಂದ ಮತ್ತು ಕಾಲೇಜಿನ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article