
ಅಪರಿಚಿತ ವ್ಯಕ್ತಿಯ ಕೊಲೆ: ಪ್ರಕರಣ ದಾಖಲು
Sunday, April 27, 2025
ಮಂಗಳೂರು: ನಗರ ಹೊರವಲಯದ ಕುಡುಪು ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಕೊಲೆಯಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಕೊಲೆ ಆದವನನ್ನು ಕೂಲಿ ಕಾರ್ಮಿಕ ಎಂದು ತಿಳಿದು ಬಂದಿದ್ದು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಕೊಲೆಯಾದ ವ್ಯಕ್ತಿಯ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.