ಕಣಿವೆ ರಾಜ್ಯದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರಕ್ಕೆ ಶಾಸಕ ಕಾಮತ್ ಆಗ್ರಹ

ಕಣಿವೆ ರಾಜ್ಯದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರಕ್ಕೆ ಶಾಸಕ ಕಾಮತ್ ಆಗ್ರಹ

ಮಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಭಯೋತ್ಪಾದಕ ದಾಳಿ ಖಂಡನೀಯ. ಹೇಡಿ ಭಯೋತ್ಪಾದಕರು ನಿಮ್ಮ ಧರ್ಮ ಯಾವುದು ಎಂದು ಕೇಳಿ ನಂತರವೇ ಈ ದಾಳಿ ನಡೆಸಿದ್ದು ಅವರ ನೀಚ ಮಾನಸಿಕತೆಗೆ ಹಿಡಿದ ಕೈಗನ್ನಡಿ. ಕೂಡಲೇ ಕಣಿವೆ ರಾಜ್ಯದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರಲು ರಾಜ್ಯ ಸರ್ಕಾರ ಎಲ್ಲ ವ್ಯವಸ್ಥೆಯನ್ನು ಮಾಡಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈಗಾಗಲೇ ಇಂತಹ ಹೇಯ ಕೃತ್ಯದ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದಿದ್ದು ಭಯೋತ್ಪಾದನೆಯ ವಿರುದ್ಧ ನಮ್ಮ ಹೋರಾಟ, ಸಂಕಲ್ಪ ಅಚಲವಾಗಿದೆ. ಈ ದಾಳಿಯಲ್ಲಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ತೀವ್ರ ಸಂತಾಪಗಳನ್ನು ಸೂಚಿಸುತ್ತಾ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ ಎಂದು ಶಾಸಕ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article