ಮಂಗಳೂರಿನಿಂದ ಕುಕ್ಕೆಗೆ ರೈಲು

ಮಂಗಳೂರಿನಿಂದ ಕುಕ್ಕೆಗೆ ರೈಲು

ಮಂಗಳೂರು: ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಏ. 12ರಿಂದ ಹೊಸ ರೈಲು ಆರಂಭಿಸಲಾಗುತ್ತಿದ್ದು, ದಿನಕ್ಕೆ 4 ಬಾರಿ ಸಂಚರಿಸಲಿದೆ 

ಈ ವಿಷಯವನ್ನು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೂ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಘೋಷಿಸಿದ್ದಾರೆ. ಈ ವಿಸ್ತರಣೆಗೊಂಡ ಕಬಕ ಪುತ್ತೂರು ಎಕ್ಸ್ಪ್ರೆಸ್ ರೈಲನ್ನು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಏ.12ರಂದು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಸಂಜೆ 4 ಗಂಟೆಗೆ ಧ್ವಜ ಪ್ರದರ್ಶನದ ಮೂಲಕ ಆರಂಭಿಸಲಿದ್ದಾರೆ.

ಸಂಸದ ಬ್ರಿಜೇಶ್ ಅವರು ಈ ಯೋಜನೆಯನ್ನು ಕೇಂದ್ರ ರೈಲ್ವೆ ಸಚಿವಾಲಯದೊಂದಿಗೆ ನಿರಂತರವಾಗಿ ಪ್ರಾಮುಖ್ಯತೆಯನ್ನು ಮುಂದಿಟ್ಟು, ಈಡೇರಿಸಲು ಪ್ರಯತ್ನಿಸಿದ್ದಾಗಿ ಎಕ್ಸ್ನಲ್ಲಿ ತಿಳಿಸಿದ್ದಾರೆ. ಈ ಮೂಲಕ ಕರಾವಳಿ ಮತ್ತು ಕೇರಳ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿದೆ. ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. ಇಲ್ಲಿ 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.

ಸುಬ್ರಹ್ಮಣ್ಯ-ಮಂಗಳೂರು (56626) ಪ್ಯಾಸೆಂಜರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್‌ಗೆ ತಲುಪಲಿದೆ.

ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56627) ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ  ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.

ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು (56628) ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ 2 ನಿಮಿಷ ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article