ಸಾಮೂಹಿಕ ಅತ್ಯಾಚಾರ: ಪೊಲೀಸ್ ಆಯುಕ್ತರು ಹೇಳಿದ್ದೇನು..?

ಸಾಮೂಹಿಕ ಅತ್ಯಾಚಾರ: ಪೊಲೀಸ್ ಆಯುಕ್ತರು ಹೇಳಿದ್ದೇನು..?

ಮಂಗಳೂರು: ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯೊಬ್ಬಳು ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ದೇಹದಲ್ಲಿ ಗಾಯಗಳ ಗುರುತು ಪತ್ತೆಯಾಗಿತ್ತು. ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಲಾಗಿದೆ ಎಂದು ಶಂಕಿಸಲಾಗಿತ್ತು. ಈ ಬಗ್ಗೆ ಕಮೀಷನರ್ ಅನುಪಮ್ ಅರ್ಗವಾಲ್ ಸ್ಪಷ್ಟನೆ ನೀಡಿದ್ಧಾರೆ.

ಬುಧವಾರ ರಾತ್ರಿ ಉಳ್ಳಾಲ ಪೊಲೀಸ್ ಠಾಣೆ ಸಮೀಪದಲ್ಲಿ ಘಟನೆ ನಡೆದಿದ್ದು, ಮಧ್ಯಾರಾತ್ರಿ 1.30 ಸುಮಾರಿಗೆ 112 ಒಂದು ಕರೆ ಬಂದಿರುತ್ತದೆ. ಒಂದು ಹುಡುಗಿ ಕೂಗಾಡುತ್ತಿದ್ದಾಳೆ, ಆಕೆಗೆ ಹಲ್ಲೆ ಮಾಡಿದ್ದಾರೆ ಎಂಬ ದೂರು ಸ್ವೀಕೃತವಾಗಿದೆ. ತಕ್ಷಣವೇ ಹೊಯ್ಸಳ ಘಟನಾ ಸ್ಥಳಕ್ಕೆ ತೆರಳಿ ಯುವತಿಯನ್ನು ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಅವಳು ಮಾತನಾಡುವ ಸ್ಥಿತಿಯಲ್ಲಿರದ ಕಾರಣ ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ತದ ನಂತರ ಬೆಳಗ್ಗೆ ಅವಳ ಹೇಳಿಕೆ ಪ್ರಕಾರ ನಿನ್ನೆ ರಾತ್ರಿ ಯಾರೋ ಅವಳಿಗೆ ಮದ್ಯಪಾನ ಮಾಡಿಸಿದ್ದಾರೆ. ಆನಂತರ ಪ್ರಜ್ಞೆ ತಪ್ಪಿದ್ದು, ಕಾರಲ್ಲಿ ಮೂರು ಜನ ಇದ್ದಿದ್ದಾಗಿ ಯುವತಿ ತಿಳಿಸಿದ್ದಾಳೆ. ಪ್ರಜ್ಞೆ ಬಂದ ನಂತರ ಅವಳ ಒಳಉಡುಪು ಇರಲಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾಳೆ. ಪ್ರಜ್ಞೆ ಬಂದು ಅವಳು ಕೂಗಾಡಲು ಶುರು ಮಾಡಿದಾಗ ಅವರು ಆಕೆಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಆ ಬಳಿಕ ಸ್ಥಳೀಯರ ಸಹಾಯದೊಂದಿಗೆ ಪೊಲೀಸರನ್ನು ಸಂಪರ್ಕಿಸಿದ್ದಾಳೆ ಎನ್ನಲಾಗಿದೆ.

ಅವಳ ದೂರಿನ ಆಧಾರದಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದೇವೆ. ಬುಧವಾರ ಬೆಳಿಗ್ಗೆ ತನ್ನ ಸಹಪಾಠಿ ಜೊತೆಗೆ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದಿದ್ದಳು. ಪಶ್ಚಿಮ ಬಂಗಾಳದ ಕುಚ್ ಬಿಹಾರ್ ಮೂಲದವಳಾದ ಯುವತಿ 2-3 ವರ್ಷಗಳಿಂದ ಕೇರಳದ ಫ್ಲೆವುಡ್ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಮಂಗಳೂರಿನಲ್ಲಿ ಬೇರೆ ಸಂಸ್ಥೆಯಲ್ಲಿ ಕೆಲಸದ ಅವಕಾಶವಿದ್ದ ಕಾರಣ ಸಹಚರನ ಜೊತೆ ಮಂಗಳೂರಿಗೆ ಬಂದಿದ್ದಳು.

ಈ ವೇಳೆ ಗೆಳೆಯನ ಜೊತೆಗೆ ಜಗಳವಾಗಿ ಆತ ಈಕೆಯ ಮೊಬೈಲಿಗೆ ಹಾನಿ ಮಾಡಿದ್ದ. ಹಾಗಾಗಿ ಮೊಬೈಲ್ ರಿಪೇರಿಗೆಂದು ಆಟೋ ಹಿಡಿದು ಮೊಬೈಲ್ ಅಂಗಡಿಗೆ ತೆರಳಿದ್ದಾಳೆ. ೫-೬ ಗಂಟೆಗಳ ಕಾಲ ಆಕೆ ಆಟೋ ಡ್ರೈವರ್ ಜೊತೆಗೇ ಇದ್ದು, ಅವನ ಜೊತೆಗೆ ಗೆಳೆತನ ಆಗಿದೆ. ಮೊಬೈಲ್ ರಿಪೇರಿ ಹಣ ಕೂಡಾ ಆತನೇ ಪಾವತಿಸಿದ್ದ. ಆ ಬಳಿಕ ಆಕೆ ರಾತ್ರಿ ವೇಳೆ ಪ.ಬಂಗಾಳ ಹೋಗಲು ರೈಲ್ವೇ ನಿಲ್ದಾಣಕ್ಕೆ ಬಿಡಲು ಆಟೋ ಡ್ರೈವರಿಗೆ ಹೇಳುತ್ತಾಳೆ. ಆದರೆ ಕಂಕನಾಡಿ ರೈಲ್ವೇ ನಿಲ್ದಾಣಕ್ಕೆ ಹೋಗದೇ ಆಟೋ ಡ್ರೈವರ್ ಮತ್ತಿಬ್ಬರ ಗೆಳೆಯರನ್ನು ಕರೆಸಿ ಬೇರೊಂದು ಜಾಗಕ್ಕೆ ಹೋಗುತ್ತಾರೆ. ಆ ಜಾಗದಲ್ಲಿ ಆಕೆಗೆ ಚೆನ್ನಾಗಿ ಮದ್ಯಪಾನ ಮಾಡಿಸಿ, ಆಕೆ ಪ್ರಜ್ಞೆ ತಪ್ಪಿದ್ದು, ಪ್ರಜ್ಞೆ ಬಂದಾಗ ಅತ್ಯಾಚಾರ ನಡೆದಿರುವುದು ಆಕೆ ಗಮನಕ್ಕೆ ಬಂದಿದೆ.

ಸದ್ಯ ಈ ಪ್ರಕರಣದ ತನಿಖೆ ನಡೆಸಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಮುಲ್ಕಿ ನಿವಾಸಿ 10 ವರ್ಷಕ್ಕಿಂತ ಹೆಚ್ಚು ಕಾಲ ಆಟೋ ಚಾಲಕನಾಗಿ ದುಡಿಯುತ್ತಿದ್ದ ಪ್ರಭುರಾಜ್ (38), ನಿನ್ನೆ ಮಧ್ಯಾಹ್ನ 2.30 ಸುಮಾರಿಗೆ ಆಕೆಯನ್ನು ಆಟೋದಲ್ಲಿ ಪ್ರಭುರಾಜ್ ಪಿಕಪ್ ನಡೆಸಿದ್ದನು. 

ಆ ಬಳಿಕ ಪ್ರಭುರಾಜ್ ಕುಂಪಲ ನಿವಾಸಿ ಇಲೆಕ್ಟ್ರಿಷಿಯನ್ ಕಾರ್ಯನಿರ್ವಹಿಸುವ ಮಿಥುನ್ (30) ಹಾಗೂ ಮಂಗಳೂರಿನಲ್ಲಿ ವಾಸ ಮಾಡುವ ಮತ್ತೋರ್ವ ಗೆಳೆಯ ಮಣಿ ಎಂಬಾತನನ್ನು ಕರೆದಿರುತ್ತಾರೆ. ಈ ಮೂವರು ಆಕೆಗೆ ಚೆನ್ನಾಗಿ ಕುಡಿಸಿ ಅವರು ಚೆನ್ನಾಗಿ ಕುಡಿದು ಅತ್ಯಾಚಾರ ಎಸಗಿದ್ದಾರೆ. ಯುವತಿ ತನ್ನ ಹೇಳಿಕೆಯಲ್ಲಿ ತನ್ನ ಮೇಲೆ ಅತ್ಯಾಚಾರ ಆಗಿರುವುದಾಗಿ ಹೇಳಿದ್ದಾಳೆ. ವೈದ್ಯಕೀಯ ವರದಿ ಬಂದ ಬಳಿಕ ಅತ್ಯಾಚಾರ ಆಗಿದೆಯೋ ಇಲ್ಲವೋ ಎನ್ನುವುದು ದೃಢಪಡಿಸಲಾಗುವುದು ಎಂಬುವುದಾಗಿ ಕಮೀಷನರ್ ಹೇಳಿಕೆ ನೀಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article