
ರಥಬೀದಿ ಸರ್ಕಾರಿ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ಶಿಬಿರಕ್ಕೆ ಚಾಲನೆ
Tuesday, April 22, 2025
ಮಂಗಳೂರು: ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಶಕ್ತಿನಗರದ ನಾಲ್ಯಪದವಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಏ.20 ರಂದು ಚಾಲನೆ ನೀಡಿದರು.
ಎಸ್.ಡಿ.ಎಂ.ಸಿ. ಅಧ್ಯಕ್ಷ ಕಿಶೋರ್ ಜೆ. ಧ್ವಜಾರೋಹಣಗೈದರು. ಹಿರಿಯ ವಿದ್ಯಾರ್ಥಿ ಸಂಘದ ಸಂಚಾಲಕ ಅಶೋಕ್ ನಾಯಕ್ ಶ್ರಮದಾನಕ್ಕೆ ಚಾಲನೆ ನೀಡಿದರು.
ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥೆ, ಸ್ನಾತಕ ವಿಭಾಗದ ಸಂಯೋಜಕಿ ಪ್ರೊ. ವಸಂತಿ ಪಿ. ಅವರು ಸ್ವಯಂ ಸೇವಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯಕರ ಭಂಡಾರಿ ಎಂ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, 21ನೇ ಶತಮಾನಗಳ ಪೂರಕ ಕೌಶಲ್ಯಗಳು ಎನ್.ಎಸ್.ಎಸ್. ಶಿಬಿರಕ್ಕೆ ಪೂರಾಕವಾಗುವ ವಿಚಾರಗಳ ಬಗ್ಗೆ ಮಾತನಾಡಿದರು.
ಮಾಜಿ ಕಾರ್ಪೊರೇಟರ್ ಶಕಿಲಾ ಕಾವ, ವಿದ್ಯಾದೀವಿಗೆ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ದೇವಾನಂದ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಟೋನಿ ಪಿಂಟೋ, ಶಾಲಾ ಮುಖ್ಯ ಶಿಕ್ಷಕಿ ದಾಕ್ಷಾಯನಿ ಎಸ್. ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಡಾ. ಲೋಕೇಶ್ ನಾಥ್ ಬಿ. ಪ್ರಾಸ್ತವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಡಾ. ಮೋಹನ್ ದಾಸ್ ವಂದಿಸಿದರು. ಶಾತಿ ಕಾರ್ಯಕ್ರಮ ನಿರೂಪಿಸಿದರು.