
ವಿವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ‘ವೀರಾಗ್ರಣಿ ಪ್ರಶಸ್ತಿ’
Wednesday, April 30, 2025
ಮಂಗಳೂರು: ನಗರದ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ವತಿಯಿಂದ ಎನ್‌ಎಸ್‌ಎಸ್ ಸ್ವಯಂಸೇವಕರಿಗಾಗಿ ಏರ್ಪಡಿಸಲಾಗಿದ್ದ ಜಾನಪದ ಕಲಾಸಿರಿ-2025 ಉತ್ಕರ್ಷ ಸ್ಪರ್ಧಾವಳಿಯಲ್ಲಿ ವಿಶ್ವವಿದ್ಯಾನಿಲಯ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಐಸ್ ಬ್ರೇಕರ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ದೃಶ್ಯ ಕಥಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಹಾಗೂ ನಾನಾರ್ಥ ವೈಭವ (ವೆರೈಟಿ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಸಮಗ್ರ ‘ವೀರಾಗ್ರಣಿ ಪ್ರಶಸ್ತಿ’ ಪಡೆದುಕೊಂಡಿದ್ದಾರೆ. ಇದೇ ತಂಡ ಏಪ್ರಿಲ್ 29ರಂದು ನಗರದ ಸಂತ ಅಗ್ನೇಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಿಗಾಗಿ ಏರ್ಪಡಿಸಲಾಗಿದ್ದ ಆಕೃತಿ ಸ್ಪರ್ಧೆಯಲ್ಲಿ ಪ್ರಶಸ್ತಿ ಗಳಿಸಿಕೊಂಡಿತ್ತು.
ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಡಾ. ಸುರೇಶ್ ಹಾಗೂ ಡಾ. ಗಾಯತ್ರಿ ಎನ್. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುತ್ತಾರೆ. ವಿಜೇತ ತಂಡಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್. ಅಭಿನಂದನೆ ಸಲ್ಲಿಸಿದ್ದಾರೆ.