ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಹಾಗೂ ಏಕಾಹ ಭಜನೆ

ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಹಾಗೂ ಏಕಾಹ ಭಜನೆ


ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಏ.28 ಮತ್ತು 29 ರಂದು ತಂತ್ರಿ ಉಳಿಯ ಶ್ರೀ ವಿಷ್ಣು ಅಸ್ರ ಇವರ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಹಾಗೂ ಲೋಕಕಲ್ಯಾಣಾರ್ಥವಾಗಿ ಏಕಾಹ ಭಜನೆ ನಡೆಯಲಿದೆ.

ಏ.28 ರಂದು ಪ್ರಾತಃ ಕಾಲ 6.13 ವಿಶ್ವ ಹಿಂದೂ ಪರಿಷತ್‌ನ ಅಧ್ಯಕ್ಷ ಹೆಚ್.ಕೆ. ಪುರುಷೋತ್ತಮ ದೀಪ ಬೆಳಗಿಸುವುದರ ಮೂಲಕ ಏಕಾಹ ಭಜನೆಯನ್ನು ಉದ್ಘಾಟಿಸಲಿದ್ದಾರೆ. ಜಿಲ್ಲೆಯ ವಿವಿಧ ಭಜನಾತಂಡಗಳು ಭಜನಾ ಸೇವೆ ನೀಡಲಿದ್ದಾರೆ. 


ಏ.29 ರಂದು ಪ್ರಾತಃಕಾಲ 6.15ಕ್ಕೆ ಭಜನಾ ಮಂಗಲೋತ್ಸವ ನಡೆಯಲಿದೆ. ನಂತರ ವಿಶೇಷ ಸೀಯಾಳಾಭಿಷೇಕ, ಪಂಚಾಮೃತಾಭಿಷೇಕ, ಶ್ರೀ ಗಣಪತಿ ಹವನ, ಚಂಡಿಕಾ ಹವನ ನಡೆಯಲಿದೆ. ಮಧ್ಯಾಹ್ನ 11.30ಕ್ಕೆ ಚಂಡಿಕಾ ಹೋಮದ ಪೂರ್ಣಾಹುತಿಯ ನಂತರ ಮಧ್ಯಾಹ್ನದ ಮಹಾಪೂಜೆ ನಡೆದು ಪ್ರಸಾದ ಭೋಜನ ನಡೆಯಲಿದೆ. 

ಸಂಜೆ 5 ಗಂಟೆಯಿಂದ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮವನ್ನು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಬಿ. ಪುರಾಣಿಕ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜ್ಞಾನ ಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಕೆ.ಸಿ. ನಾಕ್ ವಹಿಸಲಿದ್ದಾರೆ. ರಾತ್ರಿ 8 ಗಂಟೆಗೆ ಮಹಾಪೂಜೆ, ಶ್ರೀ ದೇವರಿಗೆ ರಂಗ ಪೂಜೆ ಜರುಗಿ ಪ್ರಸಾದ ವಿತರಣೆ ನಡೆಯಲಿದೆ.

ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ-ಲೋಕ ಕಲ್ಯಾಣಾರ್ಥವಾಗಿ 108 ಭಕ್ತಾದಿಗಳಿಂದ ಏ.29 ರಂದು ಸಂಜೆ 5 ಗಂಟೆಗೆ ವಿಷ್ಣು ಸಹಸ್ರನಾಮ ಪಾರಾಯಣ ನಡೆಯಲಿದೆ. ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಮಾಡುವ ಆಸಕ್ತ ಭಕ್ತಾದಿಗಳಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಆಸಕ್ತರು ದೇವಸ್ಥಾನದ ಕಚೇರಿ ಮೊ.ನಂ: 8971366902 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article