ಜಿಲ್ಲಾಧಿಕಾರಿ ಕಚೇರಿ: ಕಾಮಗಾರಿ ಪರಿಶೀಲನೆ

ಜಿಲ್ಲಾಧಿಕಾರಿ ಕಚೇರಿ: ಕಾಮಗಾರಿ ಪರಿಶೀಲನೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರೊಂದಿಗೆ ಪಡೀಲ್‌ನಲ್ಲಿ ನಿರ್ಮಾಣವಾಗುತ್ತಿರುವ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಕಾಮಗಾರಿ ಪ್ರಗತಿಯನ್ನು ಇಂದು ಪರಿಶೀಲಿಸಿದರು. 

ಈ ಸಂದರ್ಭ ಮಾತನಾಡಿದ ಅವರು ಜಿಲ್ಲಾಧಿಕಾರಿಗಳ ನೂತನ ಕಚೇರಿ ನಿರ್ಮಾಣ ಕಾರ್ಯವು ಅಂತಿಮ ಹಂತದಲ್ಲಿದೆ. ಏ.20 ರೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಯವನ್ನು ಕೋರಿದ್ದೇವೆ. ಮುಖ್ಯಮಂತ್ರಿಗಳ ಲಭ್ಯತೆಯ ಆಧಾರದ ಮೇಲೆ ನೂತನ ಜಿಲ್ಲಾಧಿಕಾರಿಗಳ ಕಚೇರಿ, ಮೂಡುಬಿದ್ರೆಯ ಒಳಾಂಗಣ ಕ್ರೀಡಾಂಗಣ ಮತ್ತು ಪ್ರಜಾ ಸೌಧದ ಉದ್ಘಾಟನಾ ಕಾರ್ಯಕ್ರಮವನ್ನು ನಿಗದಿಪಡಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಅವರೇ ಉದ್ಘಾಟಿಸಲಿದ್ದಾರೆ ಎಂಬುದು ನಮಗೆ ಸಂತಸ ತಂದಿದೆ. ಏಪ್ರಿಲ್ ತಿಂಗಳಿನಲ್ಲಿ ಉದ್ಘಾಟನೆ ನಡೆಸಲು ನಾವು ಯೋಜಿಸಿದ್ದೇವೆ" ಎಂದರು.

"ಈ ನೂತನ ಕಟ್ಟಡವು ಸಾರ್ವಜನಿಕರಿಗೆ ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸಲಿದೆ. ಉದ್ಘಾಟನೆಯ ನಂತರ, ಉಪ-ನೋಂದಣಿ ಕಚೇರಿ, ಸಮಾಜ ಕಲ್ಯಾಣ, ಮಕ್ಕಳ ಕಲ್ಯಾಣ, ಗಣಿ ಇಲಾಖೆ ಮತ್ತು ದಾಖಲೆ ಕೊಠಡಿಗಳು ಸೇರಿದಂತೆ ಸುಮಾರು 35 ಇಲಾಖೆಗಳನ್ನು ತಕ್ಷಣವೇ ಹೊಸ ಆವರಣಕ್ಕೆ ಸ್ಥಳಾಂತರಿಸಲಾಗುವುದು. ಹೆಚ್ಚುವರಿಯಾಗಿ, ಆರೋಗ್ಯ ಇಲಾಖೆಗೆ ಹೊಸ ಕಟ್ಟಡವನ್ನು ನಿರ್ಮಿಸಲಾಗುವುದು" ಎಂದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೊದಲಾದವರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article