
ಡಾ. ಅರುಣ್ ಕುಮಾರ್ ಶೆಟ್ಟಿ ಅವರಿಗೆ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ
Monday, April 21, 2025
ಮಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕೊಡಲ್ಪಡುವ ಅತ್ಯುನ್ನತ ಪ್ರಶಸ್ತಿಯಾದ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ದಕ್ಷಿಣ ಕನ್ನಡ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಉಪ ನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ ಅವರಿಗೆ ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರದಾನ ಮಾಡಿದರು.
ಅವರು ಪ್ರಸ್ತುತ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಹೆಚ್ಚುವರಿ ಆಯುಕ್ತರಾಗಿಯೂ ಮತ್ತು ಮೂಡಬಿದ್ರೆ ತಾಲೂಕು ಪಂಚಾಯತ್‌ನ ಆಡಳಿತಾಧಿಕಾರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಇವರಿಗೆ ಸರ್ಕಾರಿ ನೌಕರರ ದಿನಾಚರಣೆಯಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.