
ಕರಿಮಣಿ ಸರ ಕಳ್ಳನ ಬಂಧನ
ಮೂಡುಬಿದಿರೆ: ಮೂಡುಬಿದಿರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೃದ್ಧ ಮಹಿಳೆಯ ಚಿನ್ನದ ಕರಿಮಣಿಯನ್ನು ಎಗರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಡುಪಿ ಜಿಲ್ಲೆಯ ಕಾರ್ಕಳದ ಕಾಂತಾವಾರ ಗ್ರಾಮದ ನಿವಾಸಿ ಪ್ರಶಾಂತ್ ಸಾಲಿಯನ್ ಯಾನೆ ಪಚ್ಚು (34) ಎಂದು ಗುರುತಿಸಲಾಗಿದೆ.
ಮಾ.31 ರಂದು ಮಧ್ಯಾಹ್ನ ಬೆಳುವಾಯಿ ಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ ಇಂದಿರಾ ಎಂಬುವವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಕೆಂಪು ಬಣ್ಣದ ಮೋಟಾರು ಸೈಕಲಿನಲ್ಲಿ ಬಂದ ಅಪರಿಚಿತ ವ್ಯಕ್ತಿ ಓರ್ವ ಕಸಿದುಕೊಂಡು ಹೋಗಿದ್ದು, ಆನನನ್ನು ಬಂಧಿಸಿದ್ದು, ಆತನಿಂದ ಚಿನ್ನದ ಮಾಂಗಲ್ಯ ಕರಿಮಣಿ ಸರ ಹಾಗೂ ಚಿನ್ನದ ಸರದ ಒಂದು ತುಂಡು ಹಾಗೂ ಕೃತ್ಯಕ್ಕೆ ಬಳಸಿದ ಮೋಟಾರು ಸೈಕಲ್‌ನ್ನು ವಶಪಡಿಸಿಕೊಂಡಿದ್ದು, ಸ್ವಾದೀನ ಪಡಿಸಿಕೊಂಡ ಒಟ್ಟು ಮೌಲ್ಯ 3,30,000 ರೂ. ಎಂದು ಅಂದಾಜಿಸಲಾಗಿದೆ.
ಈತನನ್ನು ಹೆಚ್ಚಿನ ಮಾಹಿತಿಗೆ ವಿಚಾರಣೆಗೆ ಒಳಪಡಿಸಿದಾಗ 2-12-2024 ರಂದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕಾಂತಾವರ ಅಂಬರೀಶ್ ಗುಹೆ ಬಳಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ಮಹಿಳೆಯ ಕುತ್ತಿಗೆಯಿಂದ ಸುಲಿಗೆ ನಡೆಸಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈ ಬಗ್ಗೆ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ತೆ ಕಾರ್ಯಚರಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಡಿಸಿಪಿಗಳಾದ ಸಿದ್ಧಾರ್ಥ ಗೊಯಲ್, ರವಿಶಂಕರ್ ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಶ್ರೀಕಾಂತ್ ಕೆ. ಅವರ ನಿರ್ದೇಶನದಂತೆ, ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಅವರ ನೇತೃತ್ವದ ತಂಡ ಪಿಎಸ್‌ಐಗಳಾದ ಕೃಷ್ಣಪ್ಪ ಮತ್ತು ಪ್ರತಿಭ ಕೆ.ಸಿ., ಹಾಗೂ ಎಎಸ್‌ಐ ರಾಜೇಶ್ ಮತ್ತು ಹೆಚ್‌ಸಿಗಳಾದ ರಾಜೇಶ್, ಮೊಹಮ್ಮದ್ ಇಕ್ಬಾಲ್, ಪ್ರದೀಪ್ ಕುಮಾರ್ ಬಣಗರ್, ಮೊಹಮ್ಮದ್ ಹುಸೇನ್, ಅಕೀಲ್ ಅಹಮ್ಮದ್, ನಾಗರಾಜ್ ಲಮಾಣಿ ಮತ್ತು ಪಿ.ಸಿ. ವೆಂಕಟೇಶ್ ಭಾಗವಹಿಸಿದ್ದರು.