
ಯೆನೆಪೋಯ ತಾಂತ್ರಿಕ ವಿದ್ಯಾಲಯದಲ್ಲಿ ವಾಷಿ೯ಕೋತ್ಸವ
Wednesday, April 30, 2025
ಮೂಡುಬಿದಿರೆ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ವಾಷಿ೯ಕೋತ್ಸವ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಮಿಕ್ ಡಿಸೈನ್ಸ್ ಪ್ರೈವೇಟ್ ಲಿಮಿಟೆಡ್‌ನ ಸಿಇಒ/ನಿರ್ದೇಶಕ ರತ್ನಾಕರ್ ಭಟ್ ಯುವ ಎಂಜಿನಿಯರ್‌ಗಳನ್ನು ಉದ್ದೇಶಿಸಿ ಮಾತನಾಡಿ, ಎಂಜಿನಿಯರಿಂಗ್‌ನಲ್ಲಿ ಯಶಸ್ವಿಯಾಗಲು ಶಿಸ್ತು ಮತ್ತು ಗುರಿ ಮುಖ್ಯ. ವಿದ್ಯಾರ್ಥಿಗಳು ಯಾವಾಗಲೂ ಸ್ಪಷ್ಟ ಗುರಿಯನ್ನು ಹೊಂದಲು ಕಲಿತದ್ದನ್ನು ಅನ್ವಯಿಸಲು ಮತ್ತು ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದರು.
ಅಧ್ಯಕ್ಷತೆಯನ್ನು ಯೆನೆಪೋಯ ಗ್ರೂಪ್‌ನ ಕಾರ್ಯಾಚರಣೆ ನಿರ್ದೇಶಕ ಯೆನೆಪೋಯ ಅಬ್ದುಲ್ಲಾ ಜಾವೀದ್ ವಹಿಸಿದ್ದರು. ವೈಐಟಿಯ ಉಪ-ಪ್ರಾಂಶುಪಾಲ ಡಾ. ಪ್ರಭಾಕರ ಬಿ.ಕೆ. ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ವರದಿಯನ್ನು ಮಂಡಿಸಿದರು. ಕ್ರೀಡೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ವಾಣಿ ಆರ್ ಸ್ವಾಗತಿಸಿದರು. ಎಂಜಿನಿಯರಿಂಗ್ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನಾಗರಾಜ್ ಪಿ, ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ನಾಜಿಯಾ ಕಾರ್ಯಕ್ರಮ ನಿರೂಪಿಸಿದರು. ಮಾನವಿಕ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ಕಾವ್ಯ ಕೆ ವಂದಿಸಿದರು.