
ರಾಜ್ಯದಲ್ಲಿ ಫಿಲೋಮಿನಾ ಪ.ಪೂ. ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ 4 ರ‍್ಯಾಂಕ್
Tuesday, April 8, 2025
ಪುತ್ತೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ ಲಭಿಸಿದ್ದು, ವಾಣಿಜ್ಯ ವಿಭಾಗದಲ್ಲಿ 4 ರ‍್ಯಾಂಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಶೇಕಡ 95ಕ್ಕಿಂತ ಹೆಚ್ಚಿನ ಅಂಕಗಳನ್ನು ಈ ಬಾರಿ ಕಾಲೇಜಿನ 20 ಮಂದಿ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಎಂ. ದೀಪಾ ನಾಯಕ್, ನೀತಿ ಎನ್.ಬಿ., ಫಿದಾ ಹಲೀಮ, ಅಧಿತಿ. ಡಿ. 591 ಅಂಕಗಳನ್ನು ಪಡೆದು ರಾಜ್ಯದಲ್ಲಿ 9ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಆಕಾಶ್ ಪಿ.ಜೆ. 588 ಮತ್ತು ಕಲಾ ವಿಭಾಗದಲ್ಲಿ ಧ್ರುವ ಜೆ. ಭಂಡಾರಿ ಅವರು 562 ಅಂಕಗಳನ್ನು ಗಳಿಸಿ ಪ್ರಥಮರೆನಿಸಿಕೊಂಡಿದ್ದಾರೆ. 155 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 405 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.