ಎಂಡಿಎಂಎ ಮಾದಕ ವಸ್ತು ಪತ್ತೆ: ಇಬ್ಬರ ಬಂಧನ

ಎಂಡಿಎಂಎ ಮಾದಕ ವಸ್ತು ಪತ್ತೆ: ಇಬ್ಬರ ಬಂಧನ

ಪುತ್ತೂರು: ಕಾರೊಂದರಲ್ಲಿ ‘ಎಂಡಿಎಂಎ’ ನಿಷೇಧಿತ ವಸ್ತು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಮಾಡಿರುವ ಪುತ್ತೂರು ನಗರ ಠಾಣೆಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಟ್ಯಾರು ನಿವಾಸಿ ಇಸುಬು ಫೈಝಲ್ (30) ಮತ್ತು ದಾರಂದಕುಕ್ಕು ನಿವಾಸಿ ತಸ್ಲೀಫ್ (26) ಬಂಧಿತ ಆರೋಪಿಗಳು. 

ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಾನ್ಸನ್ ಡಿ.ಸೋಜಾ ಅವರು ಸಿಬ್ಬಂದಿಯೊಂದಿಗೆ ಭಾನುವಾರ ಬೆಳಿಗ್ಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ  ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿನ ತಾತ್ಕಾಲಿಕ ಚೆಕ್ ಪಾಯಿಂಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಟೋ 800 ಕಾರನ್ನು ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ನಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕಗಳು ಕಂಡುಬಂದಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ಕಾರು ಚಾಲಕ ಹಾಗೂ ಕಾರಿನಲ್ಲಿದ್ದ ಮತ್ತೊಬ್ಬನನ್ನು ವಿಚಾರಿಸಿದಾಗ, ತಮ್ಮ ಬಳಿ ಎಂಡಿಎಂಎ ವಸ್ತು ಇರುವುದಾಗಿಯೂ, ಇದನ್ನು ಮಾರಾಟ ಮಾಡಲು ತೆರಳುತ್ತಿರುವುದಾಗಿ ಒಪ್ಪಿಕೊಂಡಿದ್ದರು. ಪೊಲೀಸರು ಪರಿಶೀಲಿಸಿದ ವೇಳೆ 25 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, ಅದರ ಮೌಲ್ಯ ರೂ.52 ಸಾವಿರ ಎಂದು ಪೊಲೀಸರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article