
ಬಸ್-ಬುಲೆಟ್ ಬೈಕ್ ಢಿಕ್ಕಿ: ಬೈಕ್ ಸವಾರ ಮೃತ್ಯು
Tuesday, April 29, 2025
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಹಾಗೂ ಕೇರಳ ನೋಂದಾಯಿತ ಬುಲೆಟ್ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ತಾಲೂಕಿನ ಕಾವು ಸಮೀಪ ನಡೆದಿದೆ.
ಅಪಘಾತಕ್ಕೀಡಾದ ಬೈಕ್ ಸವಾರ ಕಾಸರಗೋಡು ಜಿಲ್ಲೆಯ ವರ್ಕಾಡಿ ಗ್ರಾಮದ ಪಾತೂರು ಸಮೀಪದ ಬದಿಮೂಲೆ ಎಂಬಲ್ಲಿ ವಾಸವಾಗಿರುವ ಮೊಯ್ದಿನ್ ಕುಂಞ ಎಂಬವರ ಪುತ್ರ ಅಶ್ರಫ್ ಎಂದು ತಿಳಿದು ಬಂದಿದೆ.
ಸಂಪ್ಯ ಪೊಲೀಸರು ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.