
ಮೇ.17 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸುಳ್ಯಕ್ಕೆ: ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮೋತ್ಸವದಲ್ಲಿ ಭಾಗಿ
ಸುಳ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೇ.17 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ.
ಸುಳ್ಯ ಜಯನಗರದ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಶ್ರೀ ಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ನಡೆಯುವ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳ ತಂಬಿಲ ಸೇವೆಯಲ್ಲಿ ಬಿ.ವೈ. ವಿಜಯೇಂದ್ರರು ಭಾಗವಹಿಸಲಿದ್ದಾರೆ ಎಂದು ದೈವಸ್ಥಾನದ ಸಂಚಾಲಕ ಜಿ. ಜಗನ್ನಾಥ ಜಯನಗರ ತಿಳಿಸಿದ್ದಾರೆ.
ನರೇಂದ್ರ ಮೋದಿಯವರು 3ನೇ ಬಾರಿ ಪ್ರಧಾನಿಗಳಾಗಿ ಸರಕಾರ ನಡೆಸಬೇಕೆಂದು ಭಾರತೀಯ ಜನತಾ ಪಾರ್ಟಿ ಜಯನಗರ ಬೂತ್ ಸಮಿತಿಯವರು ಸಾನಿಧ್ಯದಲ್ಲಿ ಸಂಕಲ್ಪ ಮಮಾಡಿಕೊಂಡ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳಿಗೆ ತಂಬಿಲ ಸೇವೆ ಮೇ.17 ರಂದು ನಡೆಯಲಿದೆ.
ಈ ದೈವ ಕಾರ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಜಗನ್ನಾಥ ಜಯನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.