
ಸುಳ್ಯದಲ್ಲಿ ಗುಡುಗು ಸಿಡಿಲಿನ ಅಬ್ಬರದ ಭರ್ಜರಿ ಮಳೆ
Sunday, April 27, 2025
ಸುಳ್ಯ: ಸುಳ್ಯದಲ್ಲಿ ಎ.27 ರಂದು ಗುಡುಗು ಸಹಿತ ಭಾರೀ ಮಳೆಯಾಗಿದೆ. ಸುಳ್ಯ ನಗರ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆ ಸುರಿದಿದೆ. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇದ್ದು ಸಂಜೆ 3.30 ರ ಬಳಿಕ ಮಳೆ ಸುರಿದಿದೆ.
ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಉತ್ತಮ ಮಳೆ ಸುರಿದಿದೆ. ಸುಳ್ಯ ನಗರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಗಾಳಿಯೂ ಬೀಸಿದೆ. ಕಳೆದ ಕೆಲವು ದಿನಗಳಿಂದ ಉರಿ ಬಿಸಿಲಿನ ಮತ್ತು ವಿಪರೀತ ಸೆಕೆಯ ವಾತಾವರಣ ಇತ್ತು. ಇದೀಗ ಉತ್ತಮ ಮಳೆಯಾಗಿರುವುದರಿಂದ ಇಳೆಗೆ ತಂಪೆರೆದಿದೆ. ಕತ್ತಲು ಕವಿದ ವಾತಾವರಣದೊಂದಿಗೆ ಭರ್ಜರಿ ಮಳೆಯಾಗಿದೆ.