
ಏ.30 ರಂದು ಉಡುಪಿ-ಪುತ್ತೂರು ಶ್ರೀ ಮಾಸ್ತಿ ಅಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ
Sunday, April 27, 2025
ಉಡುಪಿ: ಇಲ್ಲಿನ ಸಂತೆಕಟ್ಟೆಯ ಹಾ.ಹೆ. 66 ರ ಅಂಬಾಗಿಲು ಸಮೀಪದ ಪುತ್ತೂರು ಶ್ರೀ ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ಏ.30 ರಂದು ಅಕ್ಷಯ ತೃತೀಯ ದಿನದಂದು ದೇವಳದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಜರುಗಲಿದೆ.
ಅಂದು ಬೆಳಗ್ಗೆ ಪ್ರಾರ್ಥನೆ, ಪುಣ್ಯಾಹ, ಕಲಾ ಸಾನಿಧ್ಯಯುಕ್ತವಾಗಿ ಚಂಡಿಕಾಯಾಗ, ಶ್ರೀ ಸತ್ಯನಾರಾಯಣ ಪೂಜೆ, ಪುರ್ಣಾಹುತಿ, ಮಧ್ಯಾಹ್ನ ವಿಶೇಷ ಹೂವಿನ ಅಲಂಕಾರ ಪೂಜೆ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಮಹಾ ‘ಅನ್ನ ಸಂತರ್ಪಣೆ’ ಕಾರ್ಯಕ್ರಮ ನಡೆಯಲಿದೆ.
ಸಂಜೆ ಶ್ರೀ ಲಕ್ಷ್ಮೀ ವೆಂಕಟೇಶ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ಮತ್ತು ರಾತ್ರಿ 7.30ಕ್ಕೆ ಮಹಾಪೂಜೆ, 8 ಗಂಟೆಗೆ ಶ್ರೀದೇವಿ ದರ್ಶನ, ಪ್ರಸಾದ ವಿತರಣೆ ನಡೆಯಲಿದೆ ಎಂದು ಗಾಂವಸ್ಕರ್ ಕುಟುಂಬಸ್ಥರ ಪ್ರಕಟಣೆಯಲ್ಲಿ ತಿಳಿಸಿದೆ.