
ಬಾಲಕನಿಗೆ ಕಾರು ಢಿಕ್ಕಿ: ಸಾವು
Tuesday, April 1, 2025
ಉಡುಪಿ: ಶಾಲೆಗೆಂದು ತೆರಳುತ್ತಿದ್ದ ಬಾಲಕನಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬ್ರಹ್ಮಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಮೃತ ಬಾಲಕ ಸ್ಥಳೀಯ ಎಸ್‌ಎಮ್‌ಎಸ್ ಆಂಗ್ಲಮಾಧ್ಯಮ ಶಾಲೆಯ ೬ನೇ ತರಗತಿ ವಿದ್ಯಾರ್ಥಿ ವಂಶಿ ಜಿ. ಶೆಟ್ಟಿ (14) ಎಂದು ಗುರುತಿಸಲಾಗಿದೆ.
ಬಾಲಕ ವಂಶಿ ಜಿ. ಶೆಟ್ಟಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಕುಂದಾಪುರ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಬಾಲಕನಿಗೆ ಢಿಕ್ಕಿ ಹೊಡೆದ ರಭಸಕ್ಕೆ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.